ಸಿದ್ದಾಪುರ : ಕಲ್ಲಿನಿಂದ ಚಚ್ಚಿ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿತಙ್ನು ಬಂಧಿಸುವಲ್ಕಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನಲ್ಲಿ ಈ ಘಟನೆ ನಡೆದಿತ್ತು. ಇದು ಇಡೀ ತಾಲೂಕಿನ ಜನರನ್ನು ಬೆಚ್ಚಿ ಬೀಳಿಸಿತ್ತು.
ರಾಜು ಗೌಡ ಎಂಬಾತನನ್ನು ಇದಕ್ಕೆ ಸಂಬಂಧಿಸಿ ಬಂಧಿಸಲಾಗಿದ್ದು, ಪೋಲೀಸರು ಕ್ಷಿಪ್ರ ಕಾರ್ಯಾಚರಣೆ ಮೂಲಕ ಅವನ್ನು ವಶಕ್ಕೆ ಪಡೆದಿದ್ದಾರೆ.
ಒಂಟಿ ಮನೆಯಲ್ಲಿ ಇದ್ದ ಮಹಿಳೆ ನಿನ್ನೆ ಕಲ್ಲಿನಿಂದ ಹತ್ಯೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಈ ಬಗ್ಗೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.