ಉ.ಕ : ಎಸ್ಎಸ್ಎಲ್ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಆರು ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ.
ಶಿರಸಿಯ ಮಾರಿಕಾಂಬಾ ಸರ್ಕಾರಿ ಪ್ರೌಢಶಾಲೆಯ ಸನ್ನಿಧಿ ಮಹಾಬಲೇಶ್ವರ ಹೆಗಡೆ 625ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿ ಜಿಲ್ಲೆಗೆ ಹೆಮ್ಮೆ ತಂದಿದ್ದಾಳೆ.
11 ವಿದ್ಯಾರ್ಥಿಗಳು 624 ಅಂಕ ಪಡೆದಿದ್ದು, ಈ ಪೈಕಿ ಸಿದ್ದಾಪುರದ ಪ್ರಶಾಂತಿ ಇಂಗ್ಲಿಷ್ ಮೀಡಿಯಮ್ ಶಾಲೆಯ ಅನಿರುದ್ಧ್ ಸುರೇಶ್ ಗುಟ್ಟಿಕರ್ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾನೆ.