ಹೊನ್ನಾವರ : ತಾಲೂಕಿನ ಪಟ್ಟಣದ ಬಜಾರ್ ರಸ್ತೆಯಲ್ಲಿರುವ ಶ್ರೀರಾಮ ಸ್ಟುಡಿಯೋದಲ್ಲಿ ಆಕಸ್ಮಿಕ ಬೆಂಕಿ ಅನಾಹುತ ಸಂಭವಿಸಿದೆ.
ಸ್ಟುಡಿಯೋದಲ್ಲಿ ಬೆಂಕಿ ಅಹಾನುತ ಸಂಭವಿಸಿದ ಪರಿಣಾಮ, ಸುಮಾರು 15 ಲಕ್ಷಕ್ಕೂ ಅಧಿಕ ಹಾನಿ ಸಂಭವಿಸಿದೆ ಎನ್ನಲಾಗಿದೆ. ಸ್ಟುಡಿಯೋದಲ್ಲಿ ಹಲವು ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿದೆ.
ಅಲ್ಲದೆ, ಆಕಸ್ಮಿಕ ಬೆಂಕಿ ಅನಾಹುತದಿಂದಾಗಿ ಅಕ್ಕಪಕ್ಕದ ಅಂಗಡಿಗಳಿಗೂ ಹಾನಿಯಾಗಿದೆ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.