ಕುಮಟಾ: ಹೊಸ ಬಸ್ ನಿಲ್ದಾಣದ ಸಾರ್ವಜನಿಕ ಶೌಚಾಲಯದ ಒಳಗಡೆಯಿದ್ದ ಮಹಿಳೆಯ ವಿಡಿಯೋ ಮಾಡಲು ಯತ್ನಿಸಿದ ವ್ಯಕ್ತಿಯೊಬ್ಬನನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ವರದಿಯಾಗಿದೆ.
ಮಹಿಳೆ ಶೌಚಾಲಯಕ್ಕೆ ಹೋದಾಗ ವ್ಯಕ್ತಿಯೊಬ್ಬ ಹಿಂಬದಿಯ ಕಿಟಕಿಯಿಂದ ಇಣುಕಿ ನೋಡಿರುವುದು ಕಂಡುಬoದಿದೆ. ಅಲ್ಲದೆ, ಮೊಬೈಲ್ ನಲ್ಲಿ ವಿಡಿಯೋ ಮಾಡುತ್ತಿದ್ದ ಎನ್ನಲಾಗಿದೆ. ಕೂಡಲೇ ಮಹಿಳೆ ಕಿರುಚಿಕೊಂಡಿದ್ದಾಳೆ. ಸಾರ್ವಜನಿಕರು ಮತ್ತು ಸಾರಿಗೆ ಸಿಬ್ಬಂದಿ ಸೇರಿ ವಿಕೃತಿ ಮೆರೆದ ವ್ಯಕ್ತಿಯನ್ನು ಹಿಡಿದಿದ್ದಾರೆ. ಆತನಿಗೆ ಸರಿಯಾಗಿ ಧರ್ಮದೇಟು ನೀಡಿ, ಪೊಲೀಸರಿಗೆ ಒಪ್ಪಿಸಿದ್ದಾರೆ.
ಕುಮಟಾ ಪೊಲೀಸ್ ಠಾಣೆಯಲ್ಲಿ ಈ ಸಂಬoಧ ಪ್ರಕರಣ ದಾಖಲಾಗಿದೆ.