ಕಾರವಾರ: ಕಳೆದ ನಾಲ್ಕೈದು ದಿನಗಳಲ್ಲಿ ಸುರಿದ ಭಾರೀ ಮಳೆಗೆ ಮಲೆನಾಡು, ಕರಾವಳಿ ಜಿಲ್ಲೆಗಳ ಜನ ತತ್ತರಿಸಿದ್ದಾರೆ. ಆದರೆ ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಮೇಲ್ಮೈಸುಳಿಗಾಳಿ ತೀವ್ರತೆಯೂ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನೂ ನಾಲ್ಕು ದಿನ ಮಳೆ ಹೀಗೆಯೇ ಮುಂದುವರೆಯಲಿದೆ. ಆದ್ದರಿಂದ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಮಳೆಯಾಗಲಿದ್ದು, ಇಂದು ರೆಡ್ ಅಲರ್ಟ್ ಘೋಷಿಸಲಾಗಿದೆ.