ಕುಮಟಾ: ಜನತೆ ಭಯಪಡುವ ಘಟನೆಯೊಂದು ಇಂದು ಸಂಭವಿಸಿದ್ದು ರಾಷ್ಟ್ರೀಯ ಹೆದ್ದಾರಿ 66 ರ ಹಂದಿಗೋಣ ಗ್ರಾಮದ ಬಳಿ ತುಂಬಿದ ಗ್ಯಾಸ್ ಟ್ಯಾಂಕರ್ ವೊಂದು ಪಲ್ಟಿಯಾಗಿರುವ ಘಟನೆ ನಡೆದಿದೆ.
ಮಂಗಳೂರಿನಿಂದ ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ, ರಸ್ತೆಗೆ ಅಡ್ಡಲಾಗಿ ಬಿದ್ದಿದೆ.
ಘಟನೆಯಿಂದಾಗಿ ಇದರಿಂದಾಗಿ ಹೆದ್ದಾರಿ ಸಂಚಾರ ಅಸ್ಥವ್ಯಸ್ತಗೊಂಡಿದೆ. ಟ್ಯಾಂಕರ್ ನಿಂದ ಸಣ್ಣ ಪ್ರಮಾಣದಲ್ಲಿ ಅನಿಲ ಸೋರಿಕೆಯಾಗುತ್ತಿದ್ದು, ಯಾರನ್ನೂ ಸಮೀಪ ಬಿಡುತ್ತಿಲ್ಲ.
ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ದಳದ ಅಧಿಕಾರಿಗಳು ಭೇಟಿ ನೀಡಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.