ಕುಮಟಾ : ರಾಷ್ಟ್ರಪಿತ ಮಹಾತ್ಮ ಗಾಂಧಿಯವರ 151ನೇ ಜನ್ಮದಿನವನ್ನು ಹಾಗೂ ಲಾಲಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಕುಮಟಾ ತಾಲೂಕಿನ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ಗಾಂಧಿ ಹಾಗೂ ಶಾಸ್ತ್ರೀಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಎಲ್ ನಾಯ್ಕ ‘ಗಾಂಧಿಯವರು ಅಹಿಂಸೆಯ ಮೂಲಕವೇ ಹೋರಾಟದ ನೇತೃತ್ವ ವಹಿಸಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟರು. ಅವರ ಬದುಕು ಮತ್ತು ಹೋರಾಟ ನಮ್ಮೆಲ್ಲರಿಗೂ ಮಾದರಿ’ ಎಂದರು.
ಈ ಸಂದರ್ಭದಲ್ಲಿ ಶ್ರೀ ರವಿಕುಮಾರ್ ಮೋಹನ್ ಶೆಟ್ಟಿಯವರು ಮಹಾನ್ ಚೇತನಗಳಾದ ಮಹಾತ್ಮಾ ಗಾಂಧೀಜಿ ಹಾಗೂ ನನ್ನ ಬಹುದ್ದುರ್ ಶಾಸ್ತ್ರಿ ಅವರ ಜೀವನ ಮತ್ತು ಅವರ ಹೋರಾಟಗಳ ಬಗ್ಗೆ ಮಾತನಾಡಿ ನಮನ ಸಲ್ಲಿಸಿದರು.
ಪ್ರಮುಖರಾದ ಮಂಜುನಾಥ ಗೌಡ, ಸುರೇಖಾ ವಾರೇಕರ, ಎಂ.ಟಿ. ನಾಯ್ಕ, ಸಂತೋಷ ನಾಯ್ಕ, ದತ್ತು ಶೆಟ್ಟಿ, ರೋಹಿದಾಸ ನಾಯ್ಕ, ಮುಜಾಫರ್, ನಿತ್ಯ ನಾಯ್ಕ, ಮುಂತಾದ ಹಿರಿ ಕಿರಿಯ ಮುಖಂಡರು ಉಪಸ್ಥಿತರಿದ್ದರು.