ಕುಮಟಾ: ಕ.ರ.ವೇ ಸ್ವಾಭಿಮಾನಿ ಬಣದ ಕತಗಾಲ ಘಟಕದ ಕಾರ್ಯಕರ್ತರು ಜಿಲ್ಲಾಧ್ಯಕ್ಷ ರಾಜು ನಾಯ್ಕ ಮಾಸ್ತಿಹಳ್ಳ ಇವರ ನೇತೃತ್ವದಲ್ಲಿ ಕತಗಾಲ ಆನೆಗುಂಡಿ ಬಳಿಯ ಶಿರಸಿ-ಕುಮಟಾ ರಾಜ್ಯ ಹೆದ್ದಾರಿಯಲ್ಲಿಯ ಅಪಾಯಕಾರಿ ಹೊಂಡಗಳನ್ನು ಮಣ್ಣು ತುಂಬುವ ಮೂಲಕ ವಾಹನ ಸವಾರರಿಗೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಈ ರಸ್ತೆಯ ಬಗ್ಗೆ ಈಗಾಗಲೇ ಹಲವಾರು ಬಾರಿ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರೂ ಯಾವ ಅಧಿಕಾರಿಗಳೂ ಈ ಬಗ್ಗೆ ಗಮನ ಹರಿಸದಿರುವುದು ಶೋಚನೀಯ. ಪರಿಸ್ಥಿತಿ ಹೀಗೇ ಮುಂದುವರಿದರೆ ಅಪಘಾತಗಳು ಸಂಭವಿಸಿ, ಅಪಾರ ಪ್ರಾಣಾಪಾಯ ಸಂಭವಿಸುತ್ತಿತ್ತು. ಇದನ್ನು ಮನಗಂಡ ಕ.ರ.ವೇ ಸ್ವಾಭಿಮಾನಿ ಬಣದ ಕತಗಾಲ ಘಟಕದ ಸದಸ್ಯರು ಜಿಲ್ಲಾಧ್ಯಕ್ಷ ರಾಜು ಮಾಸ್ತಿಹಳ್ಳ ನೇತೃತ್ವದಲ್ಲಿ ಅಪಾಯಕಾರಿ ಹೊಂಡಗಳನ್ನು ಮುಚ್ಚುವ ಮೂಲಕ ಜನತೆಯ ಬಗ್ಗೆ ತಮ್ಮ ಸಂಘಟನೆಗಿರುವ ಪ್ರಾಮಾಣಿಕ ಕಾಳಜಿಯನ್ನು ತೋರಿಸಿದ್ದಾರೆ.
ಈ ಸಂದರ್ಭದಲ್ಲಿ ಕ.ರ.ವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷ ರಾಜು ನಾಯ್ಕ ಮಾಸ್ತಿಹಳ್ಳ ಹಾಗೂ ಕತಗಾಲ ಘಟಕದ ಕಾರ್ಯಕರ್ತರು ಇದ್ದರು