ಕುಮಟಾ : ತಾಲೂಕಿನ ತಂಡ್ರಕುಳಿಯ ರಾಷ್ಟ್ರೀಯ ಹೆದ್ದಾರಿ 66 ರ ಶಿರಸಿ ಕ್ರಾಸ್ ಬಳಿ ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಸಿದ್ದಾಪುರ ಮೂಲದ ಓರ್ವ ಸಾವು ಕಂಡ ಘಟನೆ ನಡೆದಿದೆ.
ಮಂಗಳೂರಿನಿಂದ ಅಂಕೋಲಾ ಕಡೆ ಬರುತಿದ್ದ ಲಾರಿಗೆ ಹುಬ್ಬಳ್ಳಿ ಕಡೆಯಿಂದ ಶಿರಸಿ ಕಡೆಗೆ ಹೊರಟಿದ್ದ ಕಾರು ಮುಖಾ ಮುಖಿ ಡಿಕ್ಕಿಯಾಗಿದೆ ಎನ್ನಲಾಗಿದೆ.
ಘಟನೆಯಲ್ಲಿ ಸಿದ್ದಾಪುರದ ಮಂಜುನಾಥ್ ಆಚಾರಿ ಎಂಬುವ ವ್ಯಕ್ತಿ ಮೃತನಾಗಿದ್ದಾನೆ.
ಈ ವೇಳೆ ಕಾರಿನಲ್ಲಿ ಚಾಲಕ ಸೇರಿ ಸಿದ್ದಾಪುರದ ಇಬ್ಬರು ಇದ್ದು ಇಬ್ಬರಿಗೂ ಗಂಭೀರ ಗಾಯವಾಗಿದ್ದು, ಇನ್ನೂರ್ವನ ಸ್ಥಿತಿ ಚಿಂತಾಜನಕವಾಗಿದೆ.
ಅಪಘಾತದಲ್ಲಿ ಗಾಯಗೊಂಡವರು ಕುಮಟಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಘಟನೆಯಿಂದಾಗಿ ಕೆಲಹೊತ್ತು ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು.