ಕುಮಟಾ: ತಾಲೂಕಿನ ಹಂದಿಗೋಣ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ರವಿವಾರ ಸಂಜೆ ಸಂಭವಿಸಿದರೆ ಚಾಲಕನ ನಿಯಂತ್ರ ತಪ್ಪಿ ಬೊಲೆರೊ ವಾಹನ ಪಲ್ಟಿಯಾದ ಘಟನೆ ಕುಮಟಾ ರಾಷ್ಟ್ರೀಯ ಹೆದ್ದಾರಿಯ ದಿವಗಿ ಸೇತುವೆ ಸಮೀಪ ಭಾನುವಾರ ರಾತ್ರಿ ಸಂಭವಿದಿದೆ.
ಹಂದಿಗೋಣ ಸಮೀಪ ಪಲ್ಟಿಯಾದ ಕಾರಿನಲ್ಲಿ ಇಬ್ಬರು ಪ್ರಯಾಣಿಕರು ಪ್ರಯಾಣಿಸುತ್ತಿದ್ದು, ಜೀವಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಗಾಯಾಳುಗಳು ಮಂಗಳೂರು ಮೂಲದವರೆಂದು ತಿಳಿದು ಬಂದಿದ್ದು, ಅಪಘಾತದಲ್ಲಿ ಕಾರು ಸಂಪೂರ್ಣ ಜಖಂಗೊಂಡಿದೆ.
ಇನ್ನೊಂದೆಡೆ ಕುಮಟಾದಿಂದ ದಿವಗಿ ಕಡೆಗೆ ತೆರಳುತ್ತಿದ್ದ ಬೊಲೇರೋ ವಾಹನ ಚಾಲಕನ ನಿಯಂತ್ರಣ ತಪ್ಪಿದ್ದು, ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಬೊಲೆರೊ ವಾಹನದಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ವಾಹನದಲ್ಲಿ ಮೂವರು ಮಹಿಳೆಯರಿದ್ದರು. ಈ ಮೂವರಿಗೂ ಸಣ್ಣಪುಟ್ಟ ಗಾಯಗೊಂಡಿದ್ದು, ಕುಮಟಾ ತಾಲೂಕಾ ಆಸ್ಪತ್ರೆಗೆ ದಾಖಲಿಸಲಾಗಿದೆ.