ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಈ ಬಾರಿ ದೀಪಾವಳಿಗೆ ಪಟಾಕಿಯನ್ನು ನಿಷೇಧ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದೀಪಾವಳಿಗೆ ಯಾವುದೇ ರೀತಿಯ ಪಟಾಕಿಗೆ ಅವಕಾಶ ಇರೋದಿಲ್ಲ. ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರದಿಂದ ಪಟಾಕಿ ನಿಷೇಧಕ್ಕೆ ನಿರ್ಧಾರ ಮಾಡಲಾಗಿದೆ. ಅಲ್ಲದೆ ಪಟಾಕಿ ನಿಷೇಧಿಸಿ ಸರ್ಕಾರದಿಂದ ಶೀಘ್ರದಲ್ಲೇ ಅಧಿಕೃತ ಆದೇಶ ಹೊರಡಿಸುವುದಾಗಿ ಬಿಎಸ್ ವೈ ತಿಳಿಸಿದ್ದಾರೆ.