ಹೊನ್ನಾವರ : ಕುತೂಹಲ ಕೆರಳಿಸಿದ್ದ ಪಟ್ಟಣ ಪಂಚಾಯತ್ ಚುನಾವಣೆ ಕೊನೆಗೂ ಸುಖಾಂತ್ಯವಾಗಿದ್ದು. ಇಂದು ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯೂ ನಡೆಯಿತು.
ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳಾದ ಶ್ರೀ ಶಿವರಾಜ ಮೇಸ್ತ ಅವರನ್ನು ಅಧ್ಯಕ್ಷರಾಗಿ ಹಾಗೂ ಶ್ರೀಮತಿ ಮೇದಾ ನಾಯ್ಕ ಅವರನ್ನು ಉಪಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.
ಈ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷದ ಕುಮಟಾ ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕರಾದ ದಿನಕರ ಶೆಟ್ಟಿ, ಭಟ್ಕಳ ಶಾಸಕ ಸುನೀಲ್ ನಾಯ್ಕ ಹಾಗೂ ಬಿಜೆಪಿ ಹೊನ್ನಾವರ ಮಂಡಲದ ಪದಾಧಿಕಾರಿಗಳು, ಅಧ್ಯಕ್ಷರು ಉಪಸ್ಥಿತರಿದ್ದರು.