ಯಲ್ಲಾಪುರ: ವಿದ್ಯಾರ್ಥಿಗಳು ಕೇವಲ ಮೊಬೈಲ್‍ನಲ್ಲಿ ಗೇಮ್ ಆಡದೇ ಮೈದಾನಕ್ಕಿಳಿದು ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಹವ್ಯಾಸ ಬೆಳೆಸಿಕೊಳ್ಳಬೇಕೆಂದು ತಹಶೀಲ್ದಾರ ಡಿ.ಜಿ.ಹೆಗಡೆ ಹೇಳಿದರು.

ಕಾಳಮ್ಮನಗರ ತಾಲೂಕಾ ಕ್ರೀಡಾಂಗಣದಲ್ಲಿ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿ.ಪಂ, ತಾ.ಪಂ, ಪ.ಪಂ, ತಾಲೂಕಾ ಯುವ ಒಕ್ಕೂಟ ಇವರ ಆಶ್ರಯದಲ್ಲಿ ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.
ಕ್ರೀಡೆಯಿಂದ ದೈಹಿಕ ಸಾಮರ್ಥ್ಯ ಹೆಚ್ಚಳ ಸಾಧ್ಯ. ಇಂದಿನ ಸ್ಪರ್ಧಾತ್ಮಕ ಸಂದರ್ಭದಲ್ಲಿ ಪಠ್ಯದ ಜೊತೆಗೆ ಕ್ರೀಡಾ ಚಟುವಟಿಕೆಗೂ ಅಷ್ಟೇ ಮಹತ್ವ ನೀಡಬೇಕು ಎಂದರು.
ಸಿಪಿಐ ಡಾ.ಮಂಜುನಾಥ ನಾಯಕ ಮಾತನಾಡಿ, ಕ್ರೀಡೆಯಿಂದ ಮಾನಸಿಕ ಮತ್ತು ಶಾರೀರಿಕ ಸ್ವಾಸ್ಥ್ಯ ತಂದುಕೊಳ್ಳಲು ಸಾದ್ಯ ಎಂದರು.
ಅಧ್ಯಕ್ಷತೆ ವಹಿಸಿದ್ದ ತಾ.ಪಂ.ಉಪಾಧ್ಯಕ್ಷೆ ಸುಜಾತಾ ಸಿದ್ದಿ ಮಾತನಾಡಿ,ಕೇವಲ ಅಂಕ ಗಳಿಕೆಗೆ ಒತ್ತು ನೀಡಲು ಹೋಗಿ ಕ್ರೀಡಾ ಚಟುವಟಿಕೆ ಕ್ಷೀಣಿಸುತ್ತಿದೆ.ಶಿಕ್ಷಣದ ಜತೆಗೆ ಕ್ರೀಡೆಗೂ ಪ್ರಾಧ್ಯನ್ಯತೆ ನೀಡಬೇಕೆಂದರು.
ಈ ಸಂದರ್ಭದಲ್ಲಿ ಕ್ರೀಡಾಪಟು ವಿಠ್ಠು ಶೆಳಕೆ ಅವರನ್ನು ಗೌರವಿಸಲಾಯಿತು. ದೈಹಿಕ ಶಿಕ್ಷಣ ಪರಿವೀಕ್ಷಕ ರವೀಂದ್ರ ಕಾಪ್ಸೆ, ಶಿಕ್ಷಣ ಸಂಯೋಜಕ ದೇವಾನಂದ ನಾಯ್ಕ, ತಾಲೂಕಾ ಯುವ ಒಕ್ಕೂಟದ ಗೌರವಾಧ್ಯಕ್ಷ ಡಾ.ರವಿ ಭಟ್ಟ ಬರಗದ್ದೆ, ಗೌರವ ಸಲಹೆಗಾರ ಸುಬ್ರಾಯ ಬಿದ್ರೆಮನೆ, ವಿ. ಜಿ. ಭಟ್ಟ, ಕಾರ್ಯದರ್ಶಿ ಶ್ರೀಧರ ಅಣಲಗಾರ, ಪತ್ರಕರ್ತರಾದ ಜಿ. ಎನ್. ಭಟ್ಟ ತಟ್ಟಿಗದ್ದೆ, ಮಂಜುನಾಥ ಹೆಗಡೆ..

RELATED ARTICLES  ಸಾಹಸ ಸಾಧನೆಯ ಮಾರ್ಗ: ರಾಘವೇಶ್ವರ ಶ್ರೀ