ಕುಮಟಾ : ಉತ್ತರ ಕನ್ನಡ ಜಿಲ್ಲೆಯಲ್ಲಿ ಚತುಷ್ಪತ ರಸ್ತೆ ಕಾಮಗಾರಿ ಆರಂಭದಿಂದಲೂ ಒಂದಲ್ಲ ಒಂದು ರೀತಿಯಲ್ಲಿ ಜಿಲ್ಲೆಯ ಜನ ಸಮಸ್ಯೆ ಎದುರಿಸುವಂತಾಗಿದೆ. ಈದೀಗ ಟೋಲ್ ಸಂಗ್ರಹ ಕೇಂದ್ರದಲ್ಲಿ ಸ್ಥಳಿಯರಿಗೆ ಉದ್ಯೋಗ ಸಿಗುವಂತಾಗಬೇಕು.ಜೊತೆಗೆ ಜಿಲ್ಲೆಯ ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗ ನೀಡುವಂತೆ ಕ.ರ.ವೇದಿಕೆ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

RELATED ARTICLES  ಪರೇಶ್ ಮೇಸ್ತಾ ಪ್ರಕರಣಕ್ಕೆ ಸಂಬಂಧಿಸಿದ ಯುವಕರು ಬೆಂಗಳೂರಿಗೆ : ಅಗತ್ಯ ವ್ಯವಸ್ಥೆ ಮಾಡಿದ ಶಾಸಕ ದಿನಕರ ಶೆಟ್ಟಿ

ಈ ಸಂದರ್ಭದಲ್ಲಿ ಉತ್ತರ ಕನ್ನಡದಲ್ಲಿ ಉದ್ಯೋಗ ಇಲ್ಲದೇ ಯುವಕರು ಅಲೆದಾಡುವಂತಾಗಿದ್ದು, ಮುಂದೆ ಇಲ್ಲಿನ ಯುವಕರಿಗೆ ಶೇ.ನೂರರಷ್ಟು ಉದ್ಯೋಗ ನೀಡಬೇಕೆಂದು ಕರವೇ ಜಿಲ್ಲಾಧ್ಯಕ್ಷ ಭಾಸ್ಕರ ಪಟಗಾರ ಆಗ್ರಹಿಸಿದರು. ಕೆ.ಎ 47 ವಾಹನಕ್ಕೆ ಸುಂಕ ವಸೂಲಿ ನಿಲ್ಲಿಸಬೇಕು ಇಲ್ಲದಿದ್ದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಅವರು ತಿಳಿಸಿದರು.

RELATED ARTICLES  ಉತ್ತರಕನ್ನಡದ ಪ್ರಮುಖ ಸುದ್ದಿಗಳು.

ಈ ಸಂದರ್ಭದಲ್ಲಿ ಜೆ.ಡಿ.ಎಸ್ ಮುಖಂಡ ಸೂರಜ್ ನಾಯ್ಕ ಸೋನಿ ಮಾತನಾಡಿ ಶಾಸಕರು ಈ ವಿಷಯದಲ್ಲಿ ಸುಮ್ಮನೆ ಕುಳಿತಿದ್ದಾರೆ. ಆದರೆ ನಾವು ಸುಮ್ಮನಿರಲು ಸಾಧ್ಯವಿಲ್ಲ ಎಂದರು.

ಈ ಸಂದರ್ಭದಲ್ಲಿ ಕರವೆ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಹಾಜರಿದ್ದರು.