ಯಲ್ಲಾಪುರ: ಮಕ್ಕಳು ಯಾವುದೇ ಜಾತಿ, ಮತ, ಧರ್ಮದ ಬೇಧ-ಭಾವವಿಲ್ಲದೇ ರಾಷ್ಟ್ರೀಯ ಐಕ್ಯತಾ ಮನೋಭಾವನೆಯನ್ನು ರೂಢಿಸಿಕೊಳ್ಳಬೇಕೆಂದು ತಾ.ಪಂ ಅಧ್ಯಕ್ಷೆ ಭವ್ಯಾ ಶೆಟ್ಟಿ ಹೇಳಿದರು.
ಮೊರಾರ್ಜಿ ವಸತಿ ಶಾಲೆಯ ಸಭಾಭವನದಲ್ಲಿ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಹಮ್ಮಿಕೊಂಡಿದ್ದ ಸದ್ಭಾವನಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸಂಸ್ಕಾರಯುತರಾಗಿ, ಸದ್ಗುಣವನ್ನು ಮೈಗೂಡಿಸಿಕೊಂಡು ಇತರರಿಗೆ ಆದರ್ಶವಾಗುವ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಎನ್. ಆರ್. ಹೆಗಡೆ ಮಾತನಾಡಿ, ನಾವೆಲ್ಲರೂ ಒಂದೇ ಎಂಬ ಮನೋಭಾವ ಹಾಗೂ ರಾಷ್ಟ್ರಾಭಿಮಾನವನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕೆಂದರು.
ಸ್ಕೌಟ್ಸ್ ಅಧ್ಯಕ್ಷ ನಂದನ ಬಾಳಗಿ, ಸಾಮಾಜಿಕ ಕಾರ್ಯಕರ್ತರಾದ ಉಲ್ಲಾಸ ಶಾನಭಾಗ, ಮಹಮ್ಮದ್ ಗೌಸ್, ಶಮಾ ಭಾರತ ಗ್ಯಾಸ್ ಏಜೆನ್ಸಿಯ ಎ. ಎ. ಶೇಖ್, ಪಿಎಸ್‍ಐ ಎ. ವೈ. ಕಾಂಬಳೆ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪ್ರಕಾಶ ನಾಯಕ, ಸಂಜಯ ನಾಯಕ ಉಪಸ್ಥಿತರಿದ್ದರು.

RELATED ARTICLES  ಪಿಯುಸಿಯಲ್ಲಿ ಅತ್ಯುತ್ತಮ ಸಾಧನೆ ತೋರಿದ ಹೊನ್ನಾವರ ಎಸ್.ಡಿ.ಎಂ ಕಾಲೇಜ್ ವಿದ್ಯಾರ್ಥಿಗಳು.