ಕಾರವಾರ: ಶುಕ್ರವಾರ ಸಂಜೆ ಜಿಲ್ಲೆಗೆ ಆಗಮಿಸಿದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ರನ್ನು ಕಾರವಾರದಲ್ಲಿ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಆತ್ಮೀಯವಾಗಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಉಸ್ತುವಾರಿ ಸುಷ್ಮಾ ರಾಜಗೋಪಾಲ್, ಮಾಜಿ ಶಾಸಕ ಸತೀಶ್ ಸೈಲ್, ಶಿರಸಿ ಬ್ಲಾಕ್ ಮಾಜಿ ಅಧ್ಯಕ್ಷ ರಮೇಶ್ ದುಭಾಶಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ವೆಂಕಟೇಶ ಹೆಗಡೆ, ಸುಮಾ ಉಗ್ರಾಣಕರ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಂತೋಷ ಶೆಟ್ಟಿ, ಕಾರ್ಯದರ್ಶಿ ಸತೀಶ ನಾಯ್ಕ್, ಪ್ರತಿಜ್ಞಾ ಬ್ಲಾಕ್ ಉಸ್ತುವಾರಿ ರಾಜು ಉಗ್ರಾಣಕರ್, ಶಿರಸಿ ಮಹಿಳಾ ಬ್ಲಾಕ್ ಅಧ್ಯಕ್ಷೆ ಗೀತಾ ಶೆಟ್ಟಿ, ನಗರಸಭಾ ಮಾಜಿ ಅಧ್ಯಕ್ಷೆ ಅರುಣಾ ವೆರ್ಣೇಕರ್, ಶಿರಸಿ ಬ್ಲಾಕ್ ಸದಸ್ಯೆ ಮಾಲತಿ ಮರಾಠೆ, ನಜೀರ್ ಮೂಡಿ ಮುಂತಾದವರು ಉಪಸ್ಥಿತರಿದ್ದರು.
ಶನಿವಾರ ಶಿರಸಿ ನಗರದ ತೋಟಿಗರ ಕಲ್ಯಾಣ ಮಂಟಪದಲ್ಲಿ ಬೆಳಿಗ್ಗೆ 11 ಗಂಟೆಗೆ ಕಾರ್ಯಕರ್ತರ ಸಮಾವೇಶ ನಡೆಯಿತು. ಪೂರ್ವದಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯಕ್ಕೆ ಭೇಟಿ ನೀಡಿ, ನಂತರ ಶ್ರೀ ಮಾರಿಕಾಂಬಾ ದೇವಾಲಯಕ್ಕೆ ತೆರಳಿ ಶ್ರೀದೇವಿಯ ದರ್ಶನ ಪಡೆಯಲಿದ್ದಾರೆ. ನಂತರ ಕಾರ್ಯಕರ್ತರ ಸಮಾವೇಶದಲ್ಲಿ ಭಾಗಿಯಾದರು.