ಕುಮಟಾ: ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ 10 ದಿನಗಳ ಕಾಲ ಉಚಿತ ಕೋಳಿ ಸಾಕಾಣಿಕಾ ತರಬೇತಿ ನಡೆಯಲಿದೆ ಎಂದು ಸಂಸ್ಥೆ ತಿಳಿಸಿದೆ.
ಡಿ.7 ರಿಂದ 16 ರವರೆಗೆ ನಡೆಯಲಿರುವ ಈ ತರಬೇತಿಯಲ್ಲಿ ಊಟ ಮತ್ತು ವಸತಿ ಉಚಿತವಾಗಿರುತ್ತದೆ. ಅಭ್ಯರ್ಥಿಯು ನಿರುದ್ಯೋಗಿಯಾಗಿದ್ದು, ಸ್ವ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು. 18-40 ವರ್ಷದೊಳಗಿನ ವಯೋಮಿತಿಯಾಗಿರಬೇಕು. ಕನ್ನಡ ಓದಲು ಹಾಗೂ ಬರೆಯಲು ಬರಬೇಕು ಹಾಗೂ ತರಬೇತಿಗೆ ಅನುಗುಣವಾಗಿ ಕನಿಷ್ಟ ಜ್ಞಾನ ಹೊಂದಿರಬೇಕು.
ಗ್ರಾಮೀಣ ಭಾಗದ ಬಿ.ಪಿ.ಎಲ್. ಅಭ್ಯರ್ಥಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ತರಬೇತಿಗೆ ಆಗಮಿಸುವವರು 4 ಪಾಸ್‌ಪೋರ್ಟ್ ಫೋಟೋ, ಆಧಾರ ಕಾರ್ಡ್, ರೇಷನ್ ಕಾರ್ಡ್ ಹಾಗೂ ಬ್ಯಾಂಕ್ ಪಾಸ್‌ಬುಕ್‌ನ ಎರಡು ಪ್ರತಿಗಳನ್ನು ಕಡ್ಡಾಯವಾಗಿ ತರಬೇಕು. ಆಸಕ್ತರು ಹೆಚ್ಚಿಬ ಮಾಹಿತಿಗಾಗಿ 08386-220530 ಅಥವಾ 9916783825 ಸಂಪರ್ಕಿಸಬಹುದಾಗಿದೆ. ಆಸಕ್ತರು ಈ ತರಬೇತಿಯ ಪ್ರಯೋಜನ ಪಡೆದುಕೊಳ್ಳುವಂತೆ ಸಂಘಟನೆ ತಿಳಿಸಿದೆ.