ಅಂಕೋಲಾ : ಅಂಕೋಲಾ ಪಟ್ಟಣದಲ್ಲಿ ಪ್ರಧಾನಮಂತ್ರಿ ಜನ ಔಷಧಿ ಕೇಂದ್ರವನ್ನು ಶಾಸಕಿ ರೂಪಾಲಿ ನಾಯ್ಕ ಉದ್ಘಾಟಿಸಿದರು.
ಬಡ ಜನರಿಗೆ ಕಡಿಮೆ ಬೆಲೆಯಲ್ಲಿ ಉತ್ತಮ ಔಷಧಿ ದೊರಕಬೇಕೆಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನ ಔಷಧ ಕೇಂದ್ರವನ್ನು ಆರಂಭಿಸಿದ್ದಾರೆ. ಈ ಔಷಧ ಕೇಂದ್ರದ ಲಾಭವನ್ನು ಎಲ್ಲರೂ ಪಡೆದುಕೊಳ್ಳಬೇಕು. ಕೇಂದ್ರದಲ್ಲಿ ಭಾರತೀಯ ಜನತಾ ಪಕ್ಷ ಅಧಿಕಾರಕ್ಕೆ ಬಂದಾಗಿನಿಂದ ಅನೇಕ ಜನ ಹಿತ ಯೋಜನೆಗಳನ್ನು ಜಾರಿಗೆ ತಂದಿದೆ.
ಗ್ರಾಮೀಣ ಭಾಗದಲ್ಲಿಯೂ ಅನುಕೂಲವಾಗುವಂತೆ ನೋಡಿಕೊಳ್ಳಬೇಕು. ಇದರಂತೆ ಆಯುಷ್ಮಾನ ಭಾರತ ಯೋಜನೆ ಜಾರಿಗೆ ಬಿಪಿಎಲ್ ಕಾರ್ಡ್‌ದಾರರಿಗೆ 5 ಲಕ್ಷದವರೆಗೆ ಹಾಗೂ ಎಪಿಎಲ್ ಕಾರ್ಡ್‌ದಾರರಿಗೆ 1.5ಲಕ್ಷದವರೆಗಿನ ಚಿಕಿತ್ಸಾ ನೆರವು ನೀಡುತ್ತಿದೆ. ಇಂತಹ ಹಲವಾರು ಯೋಜನೆಗಳ ಮಾಹಿತಿಯನ್ನು ಜನರಿಗೆ ತಲುಪಿಸುವ ಕೆಲಸ ಮಾಡಲಾಗುವುದು.
ಈ ಸಂದರ್ಭದಲ್ಲಿ ಅಂಕೋಲಾ ಪುರಸಭೆ ಅಧ್ಯಕ್ಷರಾದ ಶಾಂತಲಾ ನಾಡಕರ್ಣಿ, ಉಪಾಧ್ಯಕ್ಷರಾದ ರೇಖಾ ಗಾಂವಕರ, ಅಂಕೋಲಾ ಮಂಡಲದ ಅಧ್ಯಕ್ಷರಾದ ಸಂಜಯ ನಾಯ್ಕ, ರಾಜ್ಯ ಮೀನುಗಾರ ಪ್ರಕೋಷ್ಟಕದ ಸಹ ಸಂಚಾಲಕರಾದ ಗಣಪತಿ ಉಳ್ವೇಕರ, ಮುಖಂಡರಾದ ವಿನಾಯಕ ಪಡ್ತಿ, ಭಾಸ್ಕರ ನಾರ್ವೇಕರ, ಅಂಗಡಿಯ ಮಾಲೀಕರು, ಸ್ಥಳೀಯರು, ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.