ಶಿರಸಿ: ಹೆಸ್ಕಾಂ ಎಂ.ಟಿ. ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಿರಿಯ ಎಂಜಿನಿಯರ್ ಆತ್ಮಹತ್ಯೆಗೆ ಶರಣಾದ ಘಟನೆ ವರದಿಯಾಗಿದೆ.

ಶಿರಸಿಯ ಹೆಸ್ಕಾಂ ಎಂ.ಟಿ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಿರಿಯ ಎಂಜಿನಿಯರ್ ಸುರೇಶ ಅರಳೇಶ್ವರ ಬುಧವಾರ ರಾತ್ರಿ ವಾಹನಕ್ಕೆ ಬಳಸುವ ಆಯಿಲ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅಸ್ವಸ್ಥರಾಗಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರು ಎಳೆದಿದ್ದಾರೆ. ಅನಾರೋಗ್ಯದ ಕಾರಣ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ತಿಳಿದುಬಂದಿದೆ.