ಭಟ್ಕಳ ತಾಲೂಕ ಕನ್ನಡ ಸಾಹಿತ್ಯ ಪರಿಷತ್ ಹಾಗೂ ದೀಪಾ ಬುಕ್ ಹೌಸ್ ಪುತ್ತೂರು ಇವರ ಸಹಯೋಗದಲ್ಲಿ ನಡೆದ ಪುಸ್ತಕೋತ್ಸವ ಕಾರ್ಯಕ್ರಮಕ್ಕೆ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿಗಳು ಭೇಟಿ ನೀಡಿದರು.
ಪ್ರಶಿಕ್ಷಣಾರ್ಥಿಗಳು ಪುಸ್ತಕ ಪ್ರದರ್ಶನ ಮತ್ತು ಮಾರಾಟ ಮಳಿಗೆಯಲ್ಲಿ ಪುಸ್ತಕಗಳನ್ನು ವೀಕ್ಷಿಸಿದರು. ಪುಸ್ತಕ ಮಳಿಗೆಯ ವ್ಯವಸ್ಥಾಪಕ ಮಂಜುನಾಥ್ ಬಿ.ಎಡ್.ಪ್ರಶಿಕ್ಷಣಾರ್ಥಿಗಳಿಗೆ ಉಪಯುಕ್ತವಾದ ಪುಸ್ತಕಗಳ ಪರಿಚಯ ಮಾಡಿದರು. ಪ್ರಶಿಕ್ಷಣಾರ್ಥಿಗಳು ಪುಸ್ತಕಗಳನ್ನು ವೀಕ್ಷಿಸಿ ತಮಗೆ ಅಗತ್ಯವೆನಿಸಿದ ಪುಸ್ತಕಗಳನ್ನು ಕೊಂಡುಕೊಂಡರು.
ಪ್ರಶಿಕ್ಷಣಾರ್ಥಿಗಳೊಂದಿಗೆ ಕಾಲೇಜಿನ ಉಪನ್ಯಾಸಕರಾದ ನಾಗರಾಜ ಮಡಿವಾಳ ಹಾಗೂ ಕನ್ನಡ ಸಾಹಿತ್ಯ ಪರಿಷತ್ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ಹಾಜರಿದ್ದರು.