ಕಾರವಾರ : ಗ್ರಾಮ ಪಂಚಾಯತ್ ಗೆ ಮತದಾನದ ದಿನಾಂಕ ಸಮೀಪಿಸುತ್ತಿದ್ದು, ಮತದಾನದ ಪ್ರಕ್ರಿಯೆಯ ಕುರಿತಾಗಿ ಉತ್ತರ ಕನ್ನಡ ಜಿಲ್ಲಾಧಿಕಾರಿಗಳಾದ ಹರೀಶ ಕುಮಾರ ಅವರು ಅನೇಕ ಮಹತ್ವದ ಮಾರ್ಗಸೂಚಿಗಳ ಬಗ್ಗೆ ಮಾಹಿತಿ ನೀಡಿದ್ದಾರೆ.
ಈ ಗ್ರಾಮ ಪಂಚಾಯತ ಚುನಾವಣೆಯಲ್ಲಿ ಕರೊನಾ ಸೋಂಕಿತರಿಗೂ ಕೂಡ ಮತದಾನಕ್ಕೆ ಅವಕಾಶ ನೀಡಲಾಗಿದೆ. ಆದರೆ, ಮುಂಜಾಗೃತ ಕ್ರಮವಾಗಿ ಕೊರೋನಾ ಸೋಂಕಿತ ಮತದಾರರಿಗೆ ಪಿಪಿಇ ಕಿಟ್ ಧರಿಸಿ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಈ ಬಾರಿಯ ಗ್ರಾಮ ಪಂಚಾಯತ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಚುನಾವಣಾ ವೆಚ್ಚಕ್ಕೆ ಯಾವುದೇ ಮಿತಿ ಇಲ್ಲ. ಆದರೆ ಮಾಡಿದ ವೆಚ್ಚದ ಕುರಿತು ವಿವಿರವಾದ ಲೆಕ್ಕವನ್ನು ನೀಡಲೇ ಬೇಕಿದೆ.
ಮತಗಳಿಕೆಗಾಗಿ ಅಭ್ಯರ್ಥಿ ಅಥವಾ ಅಭ್ಯರ್ಥಿಯ ಪರವಾಗಿ ಧಾರ್ಮಿಕ ಚಿಹ್ನೆಗಳು ಮತ್ತು ಧಾರ್ಮಿಕ ವ್ಯಕ್ತಿಗಳನ್ನು ಬಳಸಿಕೊಳ್ಳುವಂತಿಲ್ಲ. ಮತದಾರರಿಗೆ ಮತದಾನ ಕೇಂದ್ರಕ್ಕೆ ಬರಲು ವಾಹನ ವ್ಯವಸ್ಥೆಯನ್ನು ಸಹ ಮಾಡಬಾರದು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ. ಪ್ರಮುಖವಾಗಿ ಸಾಮಾಜಿಕ ಜಾಲತಾಣಗಳಲ್ಲಿ ವಿವಿಧ ಜಾತಿ ಮತ್ತು ಸಮುದಾಯಗಳ ನಿಂದನೆ ಮಾಡುವ ಹಾಗೂ ವೈಮನಸತ್ವವನ್ನು ಕೆರಳಿಸುವ ಚಟುವಟಿಕೆಗಳಲ್ಲಿ ತೊಡಗುವವರ ಮೇಲೆ ಕ್ರಮ ಜರುಗಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.