ಯಲ್ಲಾಪುರ: ತೋಟದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿದ ಪ್ರಕರಣ ವರದಿಯಾಗಿದೆ.
ತಾಲೂಕಿನ ವಡೆಹುಕ್ಕಳಿ ಸಮೀಪದ ಚನ್ನೆಹುಕ್ಕಳಿಯಲ್ಲಿ ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಂಡ ಘಟನೆ ನಡೆದಿದೆ.
ಅಪ್ಪಿ ಬಾಬು ಮರಾಠಿ ಎನ್ನುವವರು ಗಾಯಗೊಂಡ ವ್ಯಕ್ತಿಯಾಗಿದ್ದು, ತಲೆಯ ಭಾಗಕ್ಕೆ ಪರಚಿ ಗಾಯಗೊಂಡಿದ್ದರು ಎನ್ನಲಾಗಿದೆ.
ಗಾಯಗೊಂಡ ಅವರನ್ನು ಧಾರವಾಡದ ಎಸ್.ಡಿ.ಎಂ ಆಸ್ಪತ್ರೆಗೆ ದಾಖಲಿಸಿರುವುದಾಗಿ ತಿಳಿದು ಬಂದಿದೆ.