ಯಲ್ಲಾಪುರ: ಗ್ಯಾಸ್ ಟ್ಯಾಂಕರ್ ಗೆ ವಿ ಆರ್ ಎಲ್ ಕಾರ್ಗೋ ಸರಕು ಸಾಗಾಣಿಕೆ ವಾಹನ ಮುಖಾಮುಖಿ ಡಿಕ್ಕಿಯಾಗಿ ಚಾಲಕ ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 63 ರ ಪಟ್ಟಣ ವ್ಯಾಪ್ತಿಯಲ್ಲಿ ಸಂಭವಿಸಿದೆ.
ಮಂಗಳೂರಿನಿಂದ ಹುಬ್ಬಳಿ ಕಡೆಗೆ ತೆರಳುತ್ತಿದ್ದ ಗ್ಯಾಸ್ ಟ್ಯಾಂಕರ್ ಇದಾಗಿದ್ದು, ಸರಕು ಸಾಗಣೆ ವಾಹನ ಸಂಪೂರ್ಣ ಜಖಂಗೊಂಡಿದೆ. ಮಂಗಳವಾರ ಬೆಳಿಗ್ಗೆ ಈ ಘಟನೆ ನಡೆದಿದ್ದು ಯಲ್ಲಾಪುರ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಚಾಲಕನನ್ನು ಹತ್ತಿರದ ತಾಲೂಕಾ ಆಸ್ಪತ್ರೆಗೆ ದಾಖಲಿಸಲಾಗಿದ್ದು ಹೆಚ್ಚಿನ ಚಿಕಿತ್ಸೆಯ ಅಗತ್ಯವಿದೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದು ಬಂದಿದೆ.
ಅದೃಷ್ಟವಷಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಗ್ಯಾಸ್ ಟ್ಯಾಂಕರ್ ನಿಂದ ಅನಿಲ ಸೋರಿಕೆಯಾಗದ ಕಾರಣ ಹೆಚ್ಚಿನ ಪ್ರಮಾಣದ ಅನಾಹುತ ತಪ್ಪಿದಂತಾಗಿದೆ.