ಕಾರವಾರ : ಉತ್ತರಕನ್ನಡದ ಅನೇಕ ದೇವಸ್ಥಾನಗಳು ಹಾಗೂ ಮುಜರಾಯಿ ಇಲಾಖೆಗೆ ಒಳಪಟ್ಟ ಇತರ ದೇವಾಲಯಗಳು ಅನಗತ್ಯ ಕಾರಣ ನೀಡಿ ಸಾರ್ವಜನಿಕರ ಅರ್ಜಿ ತಿರಸ್ಕರಿಸುವಂತಿಲ್ಲ ಎಂದು ಈ ಬಗ್ಗೆ ಉತ್ತರ ಕನ್ನಡದ ಜಿಲ್ಲಾಧಿಕಾರಿಗಳು ಅಧಿಕೃತ ಆದೇಶ ನೀಡಿದ್ದಾರೆ.
ಇದರಿಂದಾಗಿ ಮಾಹಿತಿ ಹಕ್ಕು ಅಧಿನಿಯಮದ ಅಡಿಯಲ್ಲಿ ಶಿರಸಿಯ ಶ್ರೀ ಮಾರಿಕಾಂಬಾ ದೇವಸ್ಥಾನ, ಮುರ್ಡೇಶ್ವರ, ಇಡಗುಂಜಿ, ಬಾಡದ ದೇವಾಲಯ ಹಾಗೂ ಇತರ ಪ್ರಮುಖ ದೇವಸ್ಥಾನಗಳೂ ಸೇರಿ ಉತ್ತರ ಕನ್ನಡ ಜಿಲ್ಲೆಯ 662 ದೇವಾಲಯಗಳು ಮಾಹಿತಿ ನೀಡುವುದು ಅನಿವಾರ್ಯವಾಗಿದೆ. ಮುಜರಾಯಿ ಇಲಾಖೆಗೆ ಒಳಪಟ್ಟ ದೇವಾಲಯಗಳು ಮಾಹಿತಿ ಹಕ್ಕಿನಡಿ ಮಾಹಿತಿ ನೀಡಬೇಕಾಗಿದೆ.
ಈ ಕಾರ್ಯಕ್ಕಾಗಿ ದೇವಾಲಯಗಳಲ್ಲಿ ಸಾರ್ವಜನಿಕ ಮಾಹಿತಿ ಅಧಿಕಾರಿ, ಸಹಾಯಕ ಸಾರ್ವಜನಿಕ ಮಾಹಿತಿ ಅಧಿಕಾರಿ ಹಾಗೂ ಮೇಲ್ಮನವಿ ಪ್ರಾಧಿಕಾರ ರಚನೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ದೇವಾಲಯದ ಕುರಿತಾದ ಮಾಹಿತಿಗಳನ್ನು ಪಡೆಯಲು ಸಾರ್ವಜನಿಕರಿಗೆ ಅವಕಾಶವಾಗಿದ್ದು, ಕಾರಣ ಹೇಳಿ ಸಾರ್ವಜನಿಕ ಅರ್ಜಿ ತಿರಸ್ಕರಿಸಲು ಸಾಧ್ಯವಿಲ್ಲ ಎಂಬಂತಾಗಿದೆ.