ಬೆಂಗಳೂರು : ರಾಜ್ಯದಲ್ಲಿ ಕಾಲೇಜುಗಳ ಆರಂಭದ ನಂತ್ರ, ಶಾಲಾ-ಕಾಲೇಜು ಯಾವಾಗ ಆರಂಭಗೊಳ್ಳಲಿದೆ ಎಂಬುದು ತೀವ್ರ ಕುತೂಹಲ ಮೂಡಿಸಿತ್ತು. ಇಂತಹ ಕುತೂಹಲಕ್ಕೆ ತೆರೆ ಬಿದ್ದಿದ್ದು, ಕೊನೆಗೂ ರಾಜ್ಯದಲ್ಲಿ ಶಾಲಾ-ಕಾಲೇಜುಗಳ ಪುನರಾರಂಭದ ಬಗ್ಗೆ ಮುಹೂರ್ತ ಫಿಕ್ಸ್ ಆಗಿದೆ.
ಶಾಲಾ ಕಾಲೇಜುಗಳನ್ನ ಆರಂಭಿಸುವ ವಿಚಾರವಾಗಿ ಇಂದು ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು. ಸಭೆ ಮುಕ್ತಾಯವಾದ ಬಳಿಕ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಬಿಎಸ್ವೈ, ಎಲ್ಲರ ಜೊತೆಗೆ ಸಮಾಲೋಚನೆ ಮಾಡಿದ್ದೇನೆ. 10 ಮತ್ತು 12 ತರಗತಿಗಳು ಜನವರಿ 1 ರಿಂದ ಆರಂಭವಾಗಲಿವೆ ಎಂದು ತಿಳಿಸಿದರು. 6 ರಿಂದ 9ನೇ ತರಗತಿಗೆ ವಿದ್ಯಾಗಮ ಪ್ರಾರಂಭವಾಗಲಿದೆ. ಹದಿನೈದು ದಿನಗಳ ಕಾಲ ಪರಿಸ್ಥಿತಿ ಅವಲೋಕಿಸಿ ಇತರ ತರಗತಿ ಪ್ರಾರಂಭಿಸುವ ಕುರಿತು ನಿರ್ಧಾರ ಮಾಡಲಾಗುತ್ತದೆ ಎಂದು ಹೇಳಿದರು.
ಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್, ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು.