ಕುಮಟಾ: ಸಮುದ್ರದಲ್ಲಿ ಈಜಲು ತೆರಳಿದ ಸಂದರ್ಭದಲ್ಲಿ ವ್ಯಕ್ತಿಯೋರ್ವ ನೀರಿನಲ್ಲಿ ಆಕಸ್ಮಿಕವಾಗಿ ಮುಳುಗಿ ಸಾವನ್ನಪ್ಪಿದ ಘಟನೆ ತಾಲೂಕಿನ ಗೋಕರ್ಣದ ಕುಡ್ಲೆ ಕಡಲ ತೀರದಲ್ಲಿ ಗುರುವಾರ ನಡೆದಿದೆ.

ಕೇರಳ ಮೂಲದ ವಿಶ್ವನಾಥ (30) ಮೃತ ವ್ಯಕ್ತಿಯಾಗಿದ್ದಾನೆ. ಈತನು ಪ್ರವಾಸಕ್ಕೆಂದು ಗೋಕರ್ಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಗೆಳೆಯರ ಜೊತೆ ಸಮುದ್ರಲ್ಲಿ ಈಜಲು ತೆರಳಿದ್ದು, ಸಮುದ್ರದ ಅಲೆಗಳ ರಭಸಕ್ಕೆ ಕೊಚ್ಚಿ ಹೋಗಿ ಮೃತ ಪಟ್ಟಿದ್ದಾನೆ ಎನ್‌ಲಾಗಿದೆ. ಘಟನಾ ಸ್ಥಳಕ್ಕೆ ಗೋಕರ್ಣ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಮರಣೋತ್ತರ ಪರೀಕ್ಷೆಗಾಗಿ ಗೋಕರ್ಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶವವನ್ನು ಸಾಗಿಸಲಾಗಿದೆ.

RELATED ARTICLES  ಶಿರಸಿಯ ಮಾರಿಕಾಂಬಾ ಸರ್ಕಾರಿ ಪ್ರೌಢಶಾಲೆಯ ಕುರಿತು ಉಲ್ಲೇಖಿಸಿದ ಮುಖ್ಯಮಂತ್ರಿಗಳನ್ನು ಅಭಿನಂದಿಸಿದ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ.

ಈ ಕುರಿತು ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ