ಕಾರವಾರ : ಕನ್ನಡ ಪುಸ್ತಕ ಪ್ರಾಧಿಕಾರವು ಯುವ ಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಹಾಗೂ 2016ನೇ ಸಾಲಿನ ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿ ಆಹ್ವಾನಿಸಿದೆ.
ಆಸಕ್ತರು ಸ್ವ-ವಿವರವುಳ್ಳ ಮನವಿಯೊಂದಿಗೆ ದೃಢೀಕೃತ ಎಸ್.ಎಸ್.ಎಲ್.ಸಿ ಅಂಕಪಟ್ಟಿಯ ಪ್ರತಿ ಅಥವಾ ಜನನ ಪ್ರಮಾಣ ಪತ್ರದ ಪ್ರತಿಯೊಂದಿಗೆ ಇದೇ 11ರ ಒಳಗೆ ಅರ್ಜಿ ಸಲ್ಲಿಸಬೇಕು. ಜತೆಗೆ ಕೃತಿಯು ಚೊಚ್ಚಲ ಕೃತಿಯೇ ಆಗಿದ್ದು, ಎಲ್ಲಿಯೂ ಪ್ರಕಟವಾಗಿಲ್ಲ ಎಂದು ಸ್ವಯಂ ದೃಢೀಕರಣ ಪತ್ರ ನೀಡಬೇಕು.
ಭರ್ತಿ ಮಾಡಿದ ಅರ್ಜಿಗಳನ್ನು ‘ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ ಬೆಂಗಳೂರು– 560 002’ಗೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 080-2201 7704 ಗೆ ಸಂಪರ್ಕಿಸಬಹುದು.