ಕಾರವಾರ: ವ್ಯಕ್ತಿಯೊರ್ವ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ. ಹಳೆಯ ವೈಷಮ್ಯದ ಹಿನ್ನಲೆಯಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ.
ದೇವಳಮಕ್ಕಿಯ ನಿವಾಸಿ ಮತ್ತು ದೀಪಕ ಹಳದೀಪುರ ಹಲ್ಲೆಗೆ ಒಳಗಾದ ವ್ಯಕ್ತಿ ಎನ್ನಲಾಗಿದೆ. ಈಗ ಹಲ್ಲೆ ಮಾಡಿದವನನ್ನು ತಾಲೂಕಿನ ದೇವಳಮಕ್ಕಿ ನಿವಾಸಿ ಎಂದು ಗುರುತಿಸಲಾಗಿದೆ. ಪೊಲೀಸರು ಈತನನ್ನು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಹಲ್ಲೆಮಾಡಿದಾತ ದೀಪಕ ಹಳದೀಪುರ ಮೇಲೆ ಈ ಹಿಂದೆಯೂ ಎರಡು ಬಾರಿ ಹಲ್ಲೆ ನಡೆಸಿದ್ದ ಎಂಬ ಮಾಹಿತಿ ದೊರೆತಿದೆ.
ಹಲ್ಲೆಗೊಳಗಾದ ವ್ಯಕ್ತಿಯನ್ನು ನಾಟಕ ಕಲಾವಿದ ದೀಪಕ ಹಳದೀಪುರರ ತಲೆಯ ಎರಡು ಕಡೆ ಗಂಭೀರ ಗಾಯವಾಗಿದೆ. ಸದ್ಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎನ್ನಲಾಗಿದೆ.