ಭಟ್ಕಳ : ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಪರವಾಗಿ ಜಿಲ್ಲಾ ಕೋಶಾಧ್ಯಕ್ಷ ಉಮೇಶ ಮುಂಡಳ್ಳಿ, ಭಟ್ಕಳ ತಾಲೂಕು ಕ.ಸಾ.ಪ. ಘಟಕದ ಅಧ್ಯಕ್ಷ ಶಂಕರ ನಾಯ್ಕ ಶಿರಾಲಿ,
ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಅಮೃತ ರಾಮರಥ ಅವರು ಜಯಾ ಯಾಜಿ ಶಿರಾಲಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು.
ಜಿಲ್ಲಾ ಕ.ಸಾ.ಪ. ನೀಡುವ ಪ್ರಸಕ್ತ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಆದ ಜಯಾ ಯಾಜಿ ಅವರಿಗೆ ಅವರ ಅನಾರೋಗ್ಯದ ಕಾರಣಕ್ಕಾ ಪ್ರಶಸ್ತಿ ಪ್ರದಾನ ಮಾಡಲಾಗಿರಲಿಲ್ಕ. ಮುಂದೆ ಒಂದು ಸಮಾರಂಭ ಹಮ್ಮಿಕೊಂಡು ಮರಣೋತ್ತರವಾಗಿ ಜಯಾ ಯಾಜಿಯವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಗುವುದಾಗಿ ಜಿಲ್ಲಾ ಕ.ಸಾ.ಪ. ಅಧ್ಯಕ್ಷ ಅರವಿಂದ ಕರ್ಕಿಕೋಡಿ ಈಗಾಗಲೇ ಘೋಷಿಸಿದ್ದಾರೆ ಎಂದು ಈ ಸಂದರ್ಭದಲ್ಲಿ ಉಮೇಶ ಮುಂಡಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.