ಭಟ್ಕಳ: ಇಲ್ಲಿನ ಸಿದ್ಧಾರ್ಥ ಪ.ಪೂ.ಕಾಲೇಜಿನಿಂದ ಐಐಟಿ ಹಾಗೂ ವೈದ್ಯಕೀಯ ಶಿಕ್ಷಣಕ್ಕೆ ಆಯ್ಕೆಯಾದ ಪ್ರತಿಭಾವಂತ ವಿಧ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮವನ್ನು ಸುರತ್ಕಲ್ ನ ಎನ್.ಐ.ಟಿ.ಕೆ ಯ ಪ್ರಾಧ್ಯಾಪಕ ಪ್ರೊ. ಜೊರಾ ಗೊಂಡ ಉದ್ಘಾಟಿಸಿ ಭಟ್ಕಳದ ಇತಿಹಾಸದಲ್ಲಿ ಪ್ರಥಮವೆಂಬಂತೆ ಐಐಟಿಗೆ ಸಿದ್ದಾರ್ಥ ಸಂಸ್ಥೆಯ ವಿದ್ಯಾರ್ಥಿಗಳು ಆಯ್ಕೆಯಾಗಿರುವುದು ಹೆಮ್ಮೆಯ ವಿಷಯ ಮಾತ್ರವಲ್ಲ ಸಂಸ್ಥೆಯು 10 ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ 6 ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣಕ್ಕೆ ಮತ್ತು ಮೂವರು ಐಐಟಿಯಂತಹ ಪ್ರತಿಷ್ಠಿತ ಸಂಸ್ಥೆಗಳಲ್ಲಿ ತಾಂತ್ರಿಕ ಶಿಕ್ಷಣಕ್ಕೆ ಪ್ರವೇಶ ಪಡೆದಿರುವುದು ನಿಜಕ್ಕೂ ವಿಶೇಷ ಸಾಧನೆ.

ಅತ್ಯಂತ ಕಡಿಮೆ ಸಮಯದಲ್ಲಿ ಸಿದ್ಧಾರ್ಥ ಸಂಸ್ಥೆಯ ಬಹುದೊಡ್ಢ ಸಾಧನೆಗೆ ಸಂಸ್ಥೆಯನ್ನೂ ಹಾಗೂ ಎಲ್ಲ ಉಪನ್ಯಾಸಕ ವರ್ಗದವರನ್ನೂ ಶ್ಲಾಘಿಸಿದರಲ್ಲದೇ ಇದರ ಜೊತೆಗೆ ವಿದ್ಯಾರ್ಥಿಗಳು ತಮ್ಮ ಆಸಕ್ತಿಯ ವೈವೀಧ್ಯಮಯ ಕ್ಷೇತ್ರಗಳಲ್ಲಿ ಸಾಧನೆಯನ್ನು ಮಾಡುವಂತಾಗಲಿ. ಅದಕ್ಕೆ ಪೂರಕವಾದ ಮಾರ್ಗದರ್ಶನ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯಿಂದ ದೊರಕಲಿ ಎಂದು ನುಡಿದರು. ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಭಟ್ಕಳ ಅರ್ಬನ್ ಬ್ಯಾಂಕನ ಉಪಾಧ್ಯಕ್ಷ ಎಂ.ಆರ್.ನಾಯ್ಕ ಮಾತನಾಡಿ ವಿದ್ಯಾರ್ಥಿಗಳು ಶೈಕ್ಷಣ ಕ ಸಾಧನೆಯ ಜೊತೆಗೆ ವ್ಯಕ್ತಿತ್ವ ವಿಕಸನವನ್ನೂ ಮಾಡಿಕೊಂಡು ಶಿಸ್ತಿನಿಂದ ಬದುಕನ್ನು ಕಟ್ಟಿಕೊಂಡು ಯಶಸ್ವಿಗಳಾಗಬಕೆಂದು ನುಡಿದರು. ವೇದಿಕೆಯಲ್ಲಿ ಅತಿಥಿಗಳಾಗಿ ಉಪಸ್ಥಿತರಿದ್ದ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಮಘದ ಅಧ್ಯಕ್ಷ ರಾಧಾಕೃಷ್ಣ ಭಟ್ ಮಾತನಾಡಿ ಸಿದ್ದಾರ್ಥ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಣ ಪಡೆದು ಸಾಧನೆಮಾಡಿದ ವಿದ್ಯಾರ್ಥಿಗಳಿಗೆ ಶುಭಹಾರೈಸಿ, ಸಿದ್ದಾರ್ಥ ಸಂಸ್ಥೆಯಲ್ಲಿ ಸಿಗುವ ಗುಣಮಟ್ಟದ ಶಿಕ್ಷಣ, ಮಾರ್ಗದರ್ಶನದ ಜೊತೆಗೆ ವಿದ್ಯಾರ್ಥಿಗಳ ಪರಿಶ್ರಮ ಇಷ್ಟು ದೊಡ್ಡ ಸಾಧನೆಗೆ ಮುಖ್ಯ ಕಾರಣ. ವಿದ್ಯಾರ್ಥಿಗಳ ಜೊತೆಗೆ ಅವರ ಪಾಲಕರು ಇಮದು ಸನ್ಮಾನವನ್ನು ಸ್ವಿಕರಿಸುತ್ತಿರುವ ಈ ಭಾವಪೂರ್ಣ ಸಂದರ್ಭವು ಎಲ್ಲ ವಿದ್ಯಾರ್ಥಿಗಳಿಗೆ ಮತ್ತಷ್ಟು ಸಾಧನೆ ಮಾಡಲು ಪ್ರೇರಣೆಯಾಗಲಿ ಎಂದು ನುಡಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ವೈದ್ಯ ಡಾ.ಲಕ್ಷ್ಮೀಶ್ ಮಾತನಾಡಿ ಇಂದು ಭಟ್ಕಳದಂತಹ ಊರಿನಲ್ಲಿಯೇ ವೈದ್ಯಕೀಯ ಶಿಕ್ಷಣಕ್ಕೆ ವಿದ್ಯಾರ್ಥಿಗಳು ಸರ್ಕಾರಿ ಸೀಟುಗಳನ್ನು ಪಡೆದುಕೊಳ್ಳಲು ಸೂಕ್ತ ಮಾರ್ಗದರ್ಶನ ಮತ್ತು ಶಿಕ್ಷಣವನ್ನು ಸಿದ್ಧಾರ್ಥ ಸಂಸ್ಥೆ ಒದಗಿಸುತ್ತಿರುವುದು ನಿಜಕ್ಕೂ ಈ ಭಾಗದ ವಿದ್ಯಾರ್ಥಗಳ ಸುದೈವ ಎಂದರಲ್ಲದೇ ಕೆ ಎಎಸ್ ಐಎಎಸ್ ಕ್ಷೇತ್ರಗಳಲ್ಲಿಯೂ ವಿಪುಲ ಅವಕಾಶಗಳನ್ನು ವಿದ್ಯಾರ್ಥಿಗಳು ಬಳಸಿಕೊಂಡು ಮತ್ತಷ್ಟು ಸಾಧನೆ ಮಾಡುವಂತಾಗಲಿ ಎಂದು ಹಾರೈಸಿದರು. ಇನ್ನೋರ್ವ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಹೆಸ್ಕಾಂನ ಅಭಿಯಂತರ ಶಿವಾನಂದ ನಾಯ್ಕ ಮಾತನಾಡಿ ಸಾಧನೆಗೆ ಅಸಾಧ್ಯವಾದುದು ಯಾವುದೂ ಇಲ್ಲ, ಸಮಯವನ್ನು ಮತ್ತು ನಮಗೆ ಸಿಕ್ಕ ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಂಡಾಗ ಪ್ರತಿಯೊಬ್ಬರೂ ಯಶಸ್ಸು ಗಳಿಸಲು ಸಾಧ್ಯ ಎಂದು ನುಡಿದರು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಉಪಸ್ಥಿತರಿದ್ದ ಡಿ.ಜೆ.ಕಾಮತ್, ಎಂ.ಕೆ.ನಾಯ್ಕ, ಸಂಸ್ಥೆಯ ಉಪಾಧ್ಯಕ್ಷ ಅಶೋಕ ಕುಮಾರ ಶೆಟ್ಟಿ ಮಾತನಾಡಿದರು.

RELATED ARTICLES  ಕುಮಟಾದ ಪೌರ ಕಾರ್ಮಿಕರಿಗೆ ದಿನಬಳಕೆ ಸಾಮಗ್ರಿಗಳ ಕಿಟ್ ವಿತರಿಸಿದ ಮಾಜಿ ಶಾಸಕಿ ಶಾರದಾ ಶೆಟ್ಟಿ.

ಕಾರ್ಯಕ್ರಮದಲ್ಲಿ ಭಟ್ಕಳದ ಇತಿಹಾಸದಲ್ಲೇ ಮೊದಲ ಬಾರಿಗೆ ಐಐಟಿಗೆ ಆಯ್ಕೆಯಾದ ಅಭಿಷೇಕ ನಾಯ್ಕ, ವಿ.ಐಟಿಗೆ ಆಯ್ಕೆಯಾದ ಅಭಿಷೇಕ್ ಎನ್.ಎನ್., ಎನ್ ಐಟಿಕೆಗೆ ಆಯ್ಕೆಯಾದ ಗಣೇಶ ಗೊಂಡ ಹಾಗೂ ವೈದ್ಯಕೀಯ ಶಿಕ್ಷಣಕ್ಕೆ ಆಯ್ಕೆಯಾದ ಆದರ್ಶ ನಾಯ್ಕ, ಸನತಕುಮಾರ, ಮೆಲ್ರಿಕ್, ಅನನ್ಯ ನಾಯ್ಕ, ದೀಪಾ ಎಸ್. ಹಾಗೂ ಅಶ್ವಿನಿ ಮುಂತಾದ ವಿದ್ಯಾರ್ಥಿಗಳನ್ನು ಅಭಿನಂದಿಸಿ ಸನ್ಮಾನಿಸಲಾಯಿತು. ಎಲ್ಲ ವಿದ್ಯಾರ್ಥಿಗಳು ತಮ್ಮ ಸಾಧನೆಗೆ ಸಿದ್ದಾರ್ಥ ಶಿಕ್ಷಣ ಸಂಸ್ಥೆಯು ನೀಡಿದ ಶಿಕ್ಷಣ ಮಾರ್ಗದರ್ಶನದ ಕುರಿತು ತಮ್ಮ ಅನಿಸಿಕೆಯನ್ನು ಹಂಚಿಕೊಂಡು ಸಂಸ್ಥೆಯ ಪ್ರಾಂಶುಪಾಲರಾದಿಯಾಗಿ ಎಲ್ಲ ಉಪನ್ಯಾಸಕ ವೃಂದದವರಿಗೆ ಕೃತಜ್ಞತೆಯನ್ನು ಸಲ್ಲಿಸಿ ಸಂಸ್ಥೆಯನ್ನು ತಮ್ಮ ಜೀವನದುದ್ದಕ್ಕೂ ಸ್ಮರಿಸಿಕೊಳ್ಳುವುದಾಗಿ ನುಡಿದರಲ್ಲದೇ ತಮ್ಮ ಪರೀಕ್ಷಾ ತಯಾರಿಯ ಅನುಭವಗಳನ್ನು ಕಿರಿಯ ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು. ಸಂಸ್ಥೆಯ ಪ್ರಧಾನ ಕಾರ್ಯದರ್ಶಿ, ಸಿದ್ಧಾರ್ಥ ಪ.ಪೂ.ಕಾಲೇಜಿನ ಪ್ರಾಂಶುಪಾಲೆ ಅರ್ಚನಾ ಯು. ಎಲ್ಲರನ್ನು ಗೌರವಪೂರ್ವಕವಾಗಿ ಸ್ವಾಗತಿಸಿ ಪ್ರಾಸ್ಥಾವಿಕ ನುಡಿಗಳನ್ನಾಡಿದರು. ವಿದ್ಯಾರ್ಥಿಗಳಾದ ಸಂಜನಾ ಸಂಗಡಿಗರು ಪ್ರಾರ್ಥಿಸಿದರೆ ವಿನುತಾ ಭಟ್ ಮತ್ತು ಶ್ರೇನಲ್ ಫರ್ನಾಂಡಿಸ್ ನಿರ್ವಹಿಸಿದರು. ಉಪಪ್ರಾಂಶುಪಾಲ ಪ್ರಕಾಶ ಕೆದಿಲಾಯ ವಂದಿಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕರು, ಗವರ್ನಿಂಗ್ ಕೌನ್ಸಿಲ್ ಸದಸ್ಯರು, ಉಪನ್ಯಾಸಕ ವೃಂದದವರು, ವಿದ್ಯಾರ್ಥಿಗಳು ಹಾಗೂ ಪಾಲಕ ವೃಂದದವರು ಹಾಜರಿದ್ದು ಭಾವಪೂರ್ಣ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

RELATED ARTICLES  ಹನುಮಂತ ಬೆಣ್ಣೆ ಸರಕಾರಿ ಪದವಿಪೂರ್ವ ಕಾಲೇಜಿನ ಮೈದಾನದಲ್ಲಿ ವನಮಹೋತ್ಸವ.