ಕುಮಟಾ: ಭಗವದ್ಗೀತಾ ಅಭಿಯಾನ ಸಮಿತಿ ಉತ್ತರ ಕನ್ನಡ ಇವರು ಗೀತಾ ಜಯಂತಿ ಹಾಗು ಭಗವದ್ಗೀತಾ ಅಭಿಯಾನದ ನಿಮಿತ್ತ ಹಮ್ಮಿಕೊಂಡಿದ್ದ ಉತ್ತರಕನ್ನಡ ಜಿಲ್ಲಾ ಮಟ್ಟದ ಭಗವಗ್ಗೀತಾ ಅಭಿಯಾನ ಸ್ಪರ್ಧೆ ಯಲ್ಲಿ ಭಾಗವಹಿಸಿದ ಕೊಂಕಣ ಎಜ್ಯುಕೇಶನ್ ಟ್ರಸ್ಟನ ಸರಸ್ವತಿ ಪಿ.ಯು ಕಾಲೇಜು ಹಾಗೂ ಸರಸ್ವತಿ ವಿದ್ಯಾಕೇಂದ್ರದ ವಿದ್ಯಾರ್ಥಿಗಳು ಹಿರಿ ಕಿರಿಯ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಸಾಧನೆ ಮಾಡಿರುತ್ತಾರೆ.

RELATED ARTICLES  ಸೇತುವೆ ಹಾಗೂ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಶಾಸಕಿ ಶಾರದಾ ಶೆಟ್ಟಿ.

ಕೊಂಕಣ ಎಜ್ಯುಕೇಶನ್ ಟ್ರಸ್ಟನ ಸರಸ್ವತಿ ಪಿ ಯು ಕಾಲೇಜಿನ ವಿದ್ಯಾರ್ಥಿನಿ ಮಹಾಲಸಾ ನಾಗೇಂದ್ರ ಪ್ಯೆ ಕಾಲೇಜು ವಿಭಾಗದ ಭಾಷಣ ಸ್ಪರ್ಧೆ ಯಲ್ಲಿ ಪ್ರಥಮ ಸ್ಥಾನ ಹಾಗೂ ಶ್ರೇಯಾ ವಿಷ್ಣು ಶಾನಬಾಗ ಗೀತಾ ಕಂಠಪಾಠ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಸಾಧನೆ ಮಾಡಿದ್ದಾಳೆ. ಸರಸ್ವತಿ ವಿದ್ಯಾಕೇಂದ್ರದ ವಿದ್ಯಾರ್ಥಿನಿ ಶ್ರೇಯಾ ಹೆಬ್ಬಾರ ಪ್ರಾಥಮಿಕ ಶಾಲಾ ವಿಭಾಗದ ಕಂಠಪಾಠ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಶಾಲೆಗೆ ತಾಲೂಕಿಗೆ ಕೀರ್ತಿ ತಂದಿರುತ್ತಾಳೆ.
ಇವರ ಸಾಧನೆಗೆ ಶಾಲಾ ಪ್ರಾಶುಂಪಾಲರು, ಮುಖ್ಯಶಿಕ್ಷಕರು, ಶಿಕ್ಷಕವೃಂದದವರು ಮತ್ತು ಆಡಳಿತ ಮಂಡಳಿಯವರು ಅಭಿನಂದಿಸಿದ್ದಾರೆ.

RELATED ARTICLES  ಸದ್ಯದಲ್ಲೇ ತೆರೆಗೆ ಬರಲಿದೆ ಶಂಕರ್‌ ನಾಗ್ ಅಭಿಮಾನಿಯ 'ಫ್ಯಾನ್' ಸಿನಿಮಾ!