ಶಿರಸಿ : ಭಾರತೀಯ ಜನತಾ ಪಕ್ಷದ ಜಿಲ್ಲಾ ಕಾರ್ಯಕಾರಿಣಿ ಸಭೆ ನಡೆಯಿತು. ಭಾರತೀಯ ಜನತಾ ಪಕ್ಷ ತಾಯಿ ಇದ್ದಂತೆ ಅದನ್ನು ನಾವು ಪ್ರೀತಿಸಿ, ಗೌರವಿಸಬೇಕು. ಬೂತ್ ಮಟ್ಟದ ಹಾಗೂ ಪ್ರತಿಯೋಬ್ಬ ಕಾರ್ಯಕರ್ತರ ಶ್ರಮದಿಂದಾಗಿ ಕಾರವಾರದಲ್ಲಿ 70 ವರ್ಷಗಳ ನಂತರ ಭಾರತೀಯ ಜನತಾ ಪಕ್ಷ ಗಟ್ಟಿಯಾಗಿ ನೆಲೆ ನಿಂತಿದೆ ಎಂದು ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀಮತಿ ರೂಪಾಲಿ ಎಸ್. ನಾಯ್ಕ ತಿಳಿಸಿದರು. ಪಕ್ಷವನ್ನು ಸಂಘಟನಾತ್ಮಕವಾಗಿ ಬೆಳೆಸುವುದರಿಂದ ಇನ್ನಷ್ಟು ಶಕ್ತಿ ತುಂಬಿದಂತಾಗುತ್ತದೆ ಎಂದು ಹೇಳಿದರು.
ಎಲ್ಲರೂ ಒಗ್ಗಟ್ಟಿನಿಂದ ಸಂಘಟನೆಯಲ್ಲಿ ತೊಡಗಿಕೊಂಡರೆ ಪಕ್ಷವನ್ನು ಹೆಚ್ಚು ಸದೃಢವಾಗಿ ಬೆಳೆಸಲು ಸಹಕಾರಿಯಾಗುತ್ತದೆ. ಇದೇ ರೀತಿ ಪಕ್ಷ ಸಂಘಟನೆಗೆ ಶ್ರಮಿಸುತ್ತಿದ್ದರೆ, ಜಿಲ್ಲಾ ಪಂಚಾಯತ ಹಾಗೂ ತಾಲ್ಲುಕಾ ಪಂಚಾಯತನಲ್ಲಿಯೂ ಗೆಲುವು ಸಾಧಿಸಬಹುದಾಗಿದೆ ಎಂದರು.
ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಕಾರವಾರ ಹಾಗೂ ಅಂಕೋಲಾ ತಾಲ್ಲೂಕಿನಲ್ಲಿ ಭಾರತೀಯ ಜನತಾ ಪಕ್ಷದ ಬೆಂಬಲಿತ ಸದಸ್ಯರು ಕಾರವಾರದಲ್ಲಿ ಸುಮಾರು 11 ಪಂಚಾಯತಿ ಹಾಗೂ ಅಂಕೋಲಾದಲ್ಲಿ 16 ಪಂಚಾಯತಿಗಳಲ್ಲಿ ಬಹುಮತದಲ್ಲಿ ಗೆಲುವು ಸಾಧಿಸಿದ್ದಾರೆ ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಶ್ರೀ ವೆಂಕಟೇಶ್ ನಾಯಕ, ಜಿಲ್ಲಾ ಮುಖಂಡರು, ಪದಾಧಿಕಾರಿಗಳು, ವಿವಿಧ ಮೋರ್ಚಾ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.