ಕಾರವಾರ: ಜಿಲ್ಲೆಯಲ್ಲಿ ಮೊದಲನೆ ಹಂತದ ಕೋವಿಡ್-೧೯ ಲಸಿಕಾ ಕಾರ್ಯಕ್ರಮ ಆಯೋಜಿಸಿದ್ದು, ಜನವರಿ ೮ ರಂದು ಬೆಳಿಗ್ಗೆ ೧೦ ಗಂಟೆಗೆ ಜಿಲ್ಲೆಯ ಒಟ್ಟು ೬ ಸ್ಥಳಗಳಲ್ಲಿ ಲಸಿಕಾ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ. ಹರಿಶ್‌ಕುಮಾರ್ ಕೆ. ತಿಳಿಸಿದ್ದಾರೆ.
Frontline workersಗೆ ಪ್ರಥಮ ಆಧ್ಯತೆಯಲ್ಲಿ ಕೋವಿಡ್-೧೯ ಲಸಿಕೆಯನ್ನು ನೀಡಲು ತೀರ್ಮಾನಿಸಲಾಗಿರುತ್ತದೆ. ಕೋವಿಡ್-೧೯ ಲಸಿಕಾ (Dry Run) ಕಾರ್ಯಕ್ರಮವನ್ನು ಸುಗಮವಾಗಿ ನಡೆಸಲು ನಿರ್ಧರಿಸಿರುವ ಕಾರವಾರದ ಜಿಲ್ಲಾ ಆಸ್ಪತ್ರೆ(ಕಿಮ್ಸ್)ಗೆ ಕಾರವಾರ ಉಪ ವಿಭಾಗಾಧಿಕಾರಿ ವಿದ್ಯಾಶ್ರೀ ಚಂದರಗಿ, ಬೈತಕೋಲ್‌ನ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕಾರವಾರ ತಹಶಿಲ್ದಾರ್ ಆರ್.ವಿ. ಕಟ್ಟಿ, ಶಿರಸಿಯ ಟಿಎಸ್‌ಎಸ್ ಆಸ್ಪತ್ರೆಗೆ ಶಿರಸಿಯ ಸಹಾಯಕ ಆಯುಕ್ತರಾದ ಆಕೃತಿ ಬನ್ಸಾಲ್, ಶಿರಸಿ ತಾಲೂಕಿನ ಹೆಗಡೆಕಟ್ಟಾದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಿರಸಿ ತಹಶಿಲ್ದಾರ್ ಎಂ.ಆರ್. ಕುಲಕರ್ಣಿ, ಹೊನ್ನಾವರದ ತಾಲೂಕು ಆಸ್ಪತ್ರೆಗೆ ಹೊನ್ನಾವರ ತಹಶಿಲ್ದಾರ್ ವಿವೇಕ್ ಶಣೈ, ದಾಂಡೇಲಿಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಂಡೇಲಿ ತಹಶಿಲ್ದಾರ್ ಶೈಲೇಶ್ ಎಸ್. ಪರಮಾನಂದ ಅವರನ್ನು ಪರಿಶೀಲನಾ ವೀಕ್ಷಕರನ್ನಾಗಿ ನೇಮಿಸಿ ಜಿಲ್ಲಾಧಿಕಾರಿ ಅವರು ಆದೇಶ ಹೊರಡಿಸಿದ್ದಾರೆ.