ಅಂಕೋಲಾ : ಸೋಮವಾರ‌ ಯಲ್ಲಾಪುರ ತಾಲೂಕಿನ ಗಂಟೆ ಗಣಪತಿ ದೇವಾಲಯಕ್ಕೆ ಭೇಟಿ ನೀಡಿ ಗೋಕರ್ಣಕ್ಕೆ ತೆರಳುವಾಗ ತಾಲೂಕಿನ ಹೊಸಕಂಬಿ ಗ್ರಾಮದ ಬಳಿ ಕೇಂದ್ರ ಆಯುಷ್ ಸಚಿವ ಶ್ರೀಪಾದ್ ನಾಯಕ್ ಅವರ ಕಾರು ಪಲ್ಟಿಯಾಗಿ ಅವರ ಪತ್ನಿ ಸಾವನ್ನಪ್ಪಿದ್ದು, ನಾಲ್ವರಿಗೆ ಗಾಯಗಳಾಗಿದೆ ಈ ಬಗ್ಗೆ ಸಂತಾಪ‌ಸೂಚಿಸಿರುವ ಉತ್ತರಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು ಘಟನೆ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಶಿವರಾಮ‌ಹೆಬ್ಬಾರ್, ಕೇಂದ್ರ ಆಯುಷ್ ಸಚಿವರಾದ ಶ್ರೀ ಶ್ರೀಪಾದ ನಾಯ್ಕ ಅವರ ಧರ್ಮಪತ್ನಿ ಶ್ರೀಮತಿ ವಿಜಯಾ ಶ್ರೀಪಾದ ನಾಯ್ಕ ಅವರು ಅಪಘಾತದಲ್ಲಿ ನಿಧನರಾದ ಸುದ್ದಿ ತಿಳಿದು ತೀವ್ರ ಆಘಾತವಾಗಿದೆ.

RELATED ARTICLES  ಕುಮಟಾ ಸರ್ಕಾರಿ ಆಸ್ಪತ್ರೆಯಲ್ಲಿ ಸೂಕ್ತ ವ್ಯವಸ್ಥೆಗೆ ಕ್ರಮ ಕೈಗೊಳ್ಳಿ : ಭಾಸ್ಕರ ಪಟಗಾರ.

ಇಂದು ಮುಂಜಾನೆ ಶ್ರೀಪಾದ ನಾಯ್ಕ ಹಾಗೂ ಅವರ ಧರ್ಮಪತ್ನಿಯಾದ ಶ್ರೀಮತಿ ವಿಜಯಾ ನಾಯ್ಕ ಅವರನ್ನು ಭೇಟಿಯಾಗಿ ನಮ್ಮೂರಿನ ಕಲೆ, ದೇವಾಲಯಗಳ ವಿಶೇಷತೆಗಳ ಕುರಿತು ಕೆಲ ಕಾಲ ಅವರೊಂದಿಗೆ ಚರ್ಚಿಸಿದ್ದೆ ಖಂಡಿತವಾಗಿಯೂ ಈ ಸಾವನ್ನು ನಂಬುವುದಕ್ಕೆ ಸಾಧ್ಯವಾಗುತ್ತಿಲ್ಲ.

RELATED ARTICLES  ಸಮುದ್ರದ ಅಲೆಗೆ ಸಿಲುಕಿ ಮೂವರ ಸಾವು : ಗೋಕರ್ಣದಲ್ಲಿ ಘಟನೆ

ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಿ ಕುಟುಂಬ ವರ್ಗದವರಿಗೆ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೆನೆ ಹಾಗೂ ಶ್ರಿಪಾದ ನಾಯಕರು ಅತೀ ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಕೇಂದ್ರ ಆಯುಷ್ ಸಚಿವ ಶ್ರೀಪಾದ್ ನಾಯಕ್ ಅವರ ಕಾರಿನಲ್ಲಿದ್ದ ಅವರ ಆಪ್ತ ಕಾರ್ಯದರ್ಶಿಯೂ ಕೊನೆಯುಸಿರೆಳೆದ ಬಗ್ಗೆ ಇದೀಗ ವರದಿಯಾಗಿದ್ದು, ಸಚಿವರ ಕಾಲಿಗೆ ಗಂಭೀರ ಗಾಯಗಳಾಗಿದೆ ಎಂದು ವರದಿಯಾಗಿದೆ.