ಬೆಂಗಳೂರು: ದೈಹಿಕ ಶಿಕ್ಷಕರ ಬೇಡಿಕೆಗಳು ನ್ಯಾಯಯುತವಾಗಿದ್ದು ಅವುಗಳ ಈಡೇರಿಕೆಗೆ ತಮ್ಮ ಸಂಪೂರ್ಣ ಬೆಂಬಲವಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಶ್ರೀ ಸಿ.ಎಸ್.ಷಡಾಕ್ಷರಿ ನುಡಿದರು. ಅವರು ಇಂದು ಬೆಂಗಳೂರಿನ ನೌಕರರ ಸಭಾಭವನದಲ್ಲಿ ನಡೆದ ಕರ್ನಾಟಕ ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಗ್ರೇಡ್-2 ದೈಹಿಕ ಶಿಕ್ಷಕರ ಸಂಘದ ರಾಜ್ಯ ಪದಾಧಿಕಾರಿಗಳಿಗೆ ಪ್ರಮಾಣಪತ್ರ, ಗುರುತು ಪತ್ರ ವಿತರಣೆ ಹಾಗೂ ಸಂಘದ ನೂತನ ಲೋಗೋ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ವರ್ಗಾವಣಾ ನಿಯಮದಲ್ಲಿ ಬದಲಾವಣೆ, ನೌಕರರ ಕ್ರೀಡಾಕೂಟದಲ್ಲಿ ದೈಹಿಕ ಶಿಕ್ಷಕರಿಗೆ ಅವಕಾಶ, 60 ಮಕ್ಕಳಿರುವ ಶಾಲೆಗೆ ಅಥವಾ ಹಿರಿಯ ಪ್ರಾಥಮಿಕ ಶಾಲೆಗೆ ಒಬ್ಬ ದೈಹಿಕ ಶಿಕ್ಷಕರ ನೇಮಕ, ತೆರವಾದ ದೈಹಿಕ ಶಿಕ್ಷಕರ ಹುದ್ದೆಗಳನ್ನು ಸಹ ಶಿಕ್ಷಕರು ಎಂದು ಬದಲಾಯಿಸದೇ ದೈಹಿಕ ಶಿಕ್ಷಕರಿಗಾಗಿಯೇ ಮೀಸಲಿಡುವುದು, ಸಿ.ಆರ್.ಪಿ, ಬಿ.ಆರ್.ಪಿ, ಇ.ಸಿ.ಓ. ಹುದ್ದೆಗಳಲ್ಲಿ ದೈಹಿಕ ಶಿಕ್ಷಕರಿಗೆ ಅವಕಾಶ ನೀಡುವುದು. ಮುಂತಾದ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಅವರು ನುಡಿದರು.

RELATED ARTICLES  Easy Date Delete word Summer

IMG 20210114 WA0005

ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಗ್ರೇಡ್- 1 ದೈಹಿಕ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಲಕ್ಷ್ಮೀಪತಿಯವರು ಗ್ರೇಡ್-2 ದೈಹಿಕ ಶಿಕ್ಷಕರ ಸಂಘಕ್ಕೆ ಸಂಪೂರ್ಣ ಸಹಕಾರ ನೀಡುವ ಭರವಸೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗ್ರೇಡ್-2 ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ರವೀಂದ್ರ ಭಟ್ಟ ಸೂರಿಯವರು ತಮ್ಮ ಮುಂದಿನ ಯೋಜನೆಗಳನ್ನು ವಿವರಿಸಿ ಸಧ್ಯದಲ್ಲಿಯೇ ರಾಜ್ಯದಾದ್ಯಂತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ಆಯ್ಕೆಯಾದ ದೈಹಿಕ ಶಿಕ್ಷಕರಿಗೆ ಹಾಗೂ ರಾಜ್ಯದ ಎಲ್ಲಾ ಜಿಲ್ಲಾ ಗ್ರೇಡ್-2 ಸಂಘದ ಜಿಲ್ಲಾಧ್ಯಕ್ಷರಿಗೆ ಗೌರವಾರ್ಪಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಹಾಗೂ ದೈಹಿಕ ಶಿಕ್ಷಕರ ಬೇಡಿಕೆಗಳ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.

RELATED ARTICLES  ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಶ್ರೀ ಭಾರತಿ ಆಂಗ್ಲ ಮಾಧ್ಯಮ ಶಾಲೆ ಕವಲಕ್ಕಿಯ ವಿದ್ಯಾರ್ಥಿ.

IMG 20210114 WA0007

ಕಾರ್ಯಾಧ್ಯಕ್ಷರಾದ ಶ್ರೀ ಜೆ.ಎಮ್.ಆರ್.ಬಸವರಾಜ್ ಸ್ವಾಗತಿಸಿ ನಿರೂಪಿಸಿದರು, ಪ್ರಧಾನ ಕಾರ್ಯದರ್ಶಿ ಶ್ರೀ ಯೋಗೇಶ ಕೊಂಡಾಪುರ ಪ್ರಾಸ್ತಾವಿಕ ನುಡಿಗಳನ್ನಾಡಿದರು. ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ಆಶಾ ಬೇಗಂ ಮುನವಳ್ಳಿ, ಖಜಾಂಚಿ ಶ್ರೀ ಲಕ್ಷ್ಮಣ ಮೂರ್ತಿ, ಹಿರಿಯ ಉಪಾಧ್ಯಕ್ಷರಾದ ಶ್ರೀ ವೆಂಕಟೇಶ ಮೂರ್ತಿ, ಶ್ರೀ ಚಂದ್ರಶೇಖರ ಹಾಗೂ ರಾಜ್ಯ ಪದಾಧಿಕಾರಿಗಳು, ದೈಹಿಕ ಶಿಕ್ಷಕರು ಉಪಸ್ಥಿತರಿದ್ದರು. ಸಂಘದ ನೂತನ ಲೋಗೋವನ್ನು ಇದೇ ಸಂದರ್ಭದಲ್ಲಿ ಲೋಕಾರ್ಪಣೆಗೊಳಿಸಲಾಯಿತು. ಗ್ರೇಡ್ 2 ಸಂಘವನ್ನು ರಾಜ್ಯ ಸರ್ಕಾರಿ ನೌಕರರ ಸಂಘದೊಂದಿಗೆ ಸಂಯೋಜನೆಗೊಳಿಸಲು ಒಮ್ಮತದ ನಿರ್ಧಾರ ತೆಗೆದುಕೊಳ್ಳಲಾಯಿತು.