ಕುಮಟಾ :ಕುಮಟಾ ತಾಲೂಕಿನ ಬರ್ಗಿಯ ರಾಷ್ಟ್ರೀಯ ಹೆದ್ದಾರಿ 65ರಲ್ಲಿ ಇನ್ನೋವಾ ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ ನಡೆದು ಕಾರನಲ್ಲಿದ್ದ ಐವರಲ್ಲಿ ನಾಲ್ವರು ಗಾಯಗೊಂಡಿರುವ ಘಟನೆ ನಡೆದಿದೆ.
ಅಪಘಾತದಲ್ಲಿ ಕಾರು ಚಲಾಯಿಸುತ್ತಿದ್ದ ಹೊನ್ನಾವರದ ಜಿ ಜಿ ಶಂಕರ ಗಂಭೀರವಾಗಿ ಗಾಯಗೊಂಡಿದ್ದಾರೆ. ಬಿಜೆಪಿಯ ಹಿರಿಯ ಮುಖಂಡ ಕುಮಟದ ವಿನೋಧ ಪ್ರಭು ಸೇರಿ ಬಿಜೆಪಿಯ ಐದು ಮಂದಿ ಯಲ್ಲಾಪುರದಿಂದ ಕುಮಟಾ ಕಡೆ ಪ್ರಯಾಣಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
ಕುಮಟಾ ಕಡೆಯಿಂದ ಅಂಕೋಲಾ ಕಡೆ ಅತೀ ವೇಗವಾಗಿ ಚಲಾಯಿಸುತ್ತಿದ್ದ ಲಾರಿ ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಇನ್ನೋವಾ ಕಾರು ಹೆದ್ದಾರಿಯ ಪಕ್ಕದಲ್ಲಿ ಉರಿಳಿ ಬಿದ್ದಿದೆ. ಇದರಿಂದಾಗಿ ಕಾರಿನಲ್ಲಿದ್ದವರಿಗೆ ಗಾಯವಾಗಿದೆ.
ಬಿಜೆಪಿಯ ಹಿರಿಯ ಮುಖಂಡರಾದ ವಿನೋಧ ಪ್ರಭು ಅವರು ಸುರಕ್ಷಿತರಾಗಿದ್ದಾರೆ. ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯರು ಕುಮಟಾ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ಗೋಕರ್ಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.