ಕಾರವಾರ: ಯಲ್ಲಾಪುರ ತಾಲ್ಲೂಕಿನ ಅರಬೈಲ್ ಬಳಿ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಹುಬ್ಬಳ್ಳಿಯಿಂದ ಉತ್ತರಕನ್ನಡ ಹಾಗೂ ಗೋವಾದ ವಿವಿಧ ಸ್ಥಳಗಳಿಗೆ ತೆರಳುತ್ತಿದ್ದ ಮೆಡಿಕಲ್ ವಿದ್ಯಾರ್ಥಿಗಳ ಕಾರು ಹಾಗೂ ಬೊಲೇರೊ ನಡುವೆ ಡಿಕ್ಕಿ ಸಂಭವಿಸಿದೆ.

RELATED ARTICLES  ಚಿತ್ರಿಗಿ: ಮಹಾತ್ಮಾ ಗಾಂಧಿ ಪ್ರೌಢಶಾಲೆಯಲ್ಲಿ ಧ್ವಜಾರೋಹಣ

ಅಪಘಾತದಲ್ಲಿ ಐವರು ಮೆಡಿಕಲ್ ವಿದ್ಯಾರ್ಥಿಗಳು ಗಾಯಗೊಂಡಿರುವದಾಗಿ ವರದಿಯಾಗಿದೆ.

ಅಪಘಾತದಲ್ಲಿ ಕಾರು ನುಜ್ಜು ಗುಜ್ಜಾಗಿದ್ದು, ಕಾರಿನಲ್ಲಿದ್ದ ಐವರ ಪೈಕಿ ಡ್ರೈವರ್ ಹಾಗೂ ವಿದ್ಯಾರ್ಥಿನಿ ಸ್ಥಿತಿ ಚಿಂತಾಜನಕವಾಗಿದೆ. ಮತ್ತೆ ಮೂವರು ಕೂಡ ಗಾಯಗೊಂಡಿದ್ದು, ಗಾಯಾಳುಗಳನ್ನು ಹುಬ್ಬಳ್ಳಿ ಕಿಮ್ಸ್ ಗೆ ದಾಖಲಿಸಲಾಗಿದೆ.

RELATED ARTICLES  ಸ್ನಾನಕ್ಕೆಂದು ಸಮುದ್ರಕ್ಕೆ ಇಳಿದವನು ನಾಪತ್ತೆ.

ಈ ಬಗ್ಗೆ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.