ಕುಮಟಾ : ತಾಲೂಕಿನ ಕೊಂಕಣ ಎಜ್ಯುಕೇಶನ ಸಂಸ್ಥೆಯ ಸರಸ್ವತಿ ಪದವಿಪೂರ್ವ ವಿದ್ಯಾಲಯದ ವಾಣಿಜ್ಯ ವಿಭಾಗದಲ್ಲಿ ವ್ಯಾಸಂಗ ಮಾಡಿದ ಕುಮಟಾದ ಖುಷಿ ಆನಂದ ಭಟ್ಟ ಮತ್ತು ಸೃಷ್ಟಿ ಸುನೀಲ್ ಪೈ ಇವರು ಕಳೆದ ನವೆಂಬರ ತಿಂಗಳಿನಲ್ಲಿ ನಡೆದ ಸಿ.ಎಸ್ ಫೌಂಡೇಶನ್ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಉತ್ತೀರ್ಣರಾಗಿದ್ದಾರೆ.
ಎಚ್.ಎಸ್. ವಿಶಾಲ್ ಮತ್ತು ವಿಜಯ ಅನಂತ ಶ್ಯಾನಭಾಗ ಇವರು ಡಿಸೆಂಬರ್ ನಲ್ಲಿ ನಡೆದ ಸಿ.ಎ ಫೌಂಡೇಶನ್ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಉತ್ತೀರ್ಣರಾಗಿ ಸಂಸ್ಥೆಗೆ ಕೀರ್ತಿ ತಂದಿರುತ್ತಾರೆ. ಇವರ ಉನ್ನತ ಸಾಧನೆಗೆ ಕೊಂಕಣ ಎಜ್ಯುಕೇಶನ ಸಂಸ್ಥೆಯ ಆಡಳಿತ ಮಂಡಳಿಯವರು, ಸರಸ್ವತಿ ಪದವಿಪೂರ್ವ ವಿದ್ಯಾಲಯದ ಪ್ರಾಚಾರ್ಯರು ಮತ್ತು ಉಪನ್ಯಾಸಕ ವೃಂದದವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.