ಶಿರಸಿ: ಉತ್ತರ ಕನ್ನಡ ಜಿಲ್ಲೆಯನ್ನು ವಿಭಜಿಸಿ ಶಿರಸಿ ಪ್ರತ್ಯೇಕ ಜಿಲ್ಲೆ ರಚಿಸುವಂತೆ ಒತ್ತಾಯಿಸಿ ಶಿರಸಿ ಜಿಲ್ಲಾ ಹೋರಾಟ ಸಮಿತಿ ಕರೆ ನೀಡಿರುವ ಬಂದ್ ಗೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.
ನಗರದಲ್ಲಿ ಬಹುತೇಕ ಅಂಗಡಿ ಮಾಲೀಕರು ಸ್ವಯಂಪ್ರೇರಿತರಾಗಿ ಅಂಗಡಿ-ಮುಂಗಟ್ಟುಗಳನ್ನು ಮುಚ್ಚಿದ್ದಾರೆ.

ಔಷಧ ಅಂಗಡಿ ಹೊರತುಪಡಿಸಿ ಉಳಿದ ಮಳಿಗೆಗಳು ಸಂಪೂರ್ಣ ಬಂದ್ ಆಗಿವೆ. ಹಳೆ ಬಸ್ ನಿಲ್ದಾಣದಿಂದ ಹಲವು ಸಮಯಗಳ ಕಾಲ ಬಸ್ ಗಳ ಓಡಾಟ ಸ್ಥಗಿತಗೊಳಿಸಲಾಗಿದೆ. ಸರ್ಕಾರಿ ಪದವಿ ಕಾಲೇಜಿಗೆ ರಜೆ ಘೋಷಿಸಲಾಗಿದೆ. ಶಾಲೆಗಳು ಎಂದಿನಂತೆ ತೆರೆದುಕೊಂಡಿದೆ.

RELATED ARTICLES  ಚಿತ್ರೀಕರಣ ಪೂರೈಸಿದ ವಿನಾಯಕ ಬ್ರಹ್ಮೂರು ನಿರ್ದೇಶನದ ಮತ್ತೊಂದು ಸೆಮಿಚಿತ್ರ ’ಆಚೆ’

ಹಳೆ ಬಸ್ ನಿಲ್ದಾಣದ ವೃತ್ತದಲ್ಲಿ ವಿವಿಧ ತಾಲ್ಲೂಕುಗಳಿಂದ ಆಗಮಿಸಿದ ಪ್ರತಿಭಟನಾಕಾರರು ಜಮಾಯಿಸಿದ್ದು ಪ್ರತಿಭಟನೆ ಆರಂಭಿಸಿದ್ದಾರೆ. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಮಾಜಿ ಶಾಸಕ ವಿವೇಕಾನಂದ ವೈದ್ಯ, ಅಭಿವೃದ್ಧಿ ದೃಷ್ಟಿಯಿಂದ ಪ್ರತ್ಯೇಕ ಜಿಲ್ಲೆ ರಚನೆ ಅನಿವಾರ್ಯ. ಆದರೆ, ಈ ಬಗ್ಗೆ ಯಾವ ಜನಪ್ರತಿನಿಧಿಗಳೂ ಮಾತನಾಡದೆ ಇರುವುದು ಬೇಸರ ತಂದಿದೆ ಎಂದರು. ಜಿಲ್ಲಾ ಪಂಚಾಯ್ತಿ ಸದಸ್ಯ ಜಿ.ಎನ್.ಹೆಗಡೆ ಮುರೇಗಾರ, ಮೊದಲು ಪ್ರತ್ಯೇಕ ಜಿಲ್ಲೆ ರಚನೆಯಾಗಲಿ. ಜಿಲ್ಲಾಕೇಂದ್ರದ ಬಗ್ಗೆ ನಂತರ ತೀರ್ಮಾನಿಸೋಣ ಎಂದರು.

RELATED ARTICLES  ಪ್ಲಾಸ್ಟಿಕ್‌ ಬಳಕೆ ನಿಯಂತ್ರಿಸಲು ಅಧಿಕಾರಿಗಳ ಹರಸಾಹಸ.

ಬನವಾಸಿ ತಾಲ್ಲೂಕು ಹೋರಾಟ ಸಮಿತಿ ಅಧ್ಯಕ್ಷ ಉದಯಕುಮಾರ ಕಾನಳ್ಳಿ, ರಾಜಕೀಯ ಇಚ್ಛಾಶಕ್ತಿ ಕೊರತೆ ಎದುರಾಗಿದೆ. ಅನೇಕ ವರ್ಷಗಳಿಂದ ಹೋರಾಟ ನಡೆಯುತ್ತಿದೆ