ಹೊನ್ನಾವರ: ಖ್ಯಾತ ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಚಿಟ್ಟಾಣಿಯವರು ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆಂದು ಇದೀಗ ವರದಿಯಾಗಿದೆ.

ಹೊನ್ನಾವರ ತಾಲೂಕಿನ ಹಡಿಬಾಳದ ಸಮೀಪ ರಸ್ತೆಯಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಈ ದುರ್ಘಟನೆಯಲ್ಲಿ ಸುಬ್ರಹ್ಮಣ್ಯ ಚಿಟ್ಟಾಣಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

ಖ್ಯಾತ ಯಕ್ಷಗಾನ ಕಲಾವಿದ, ಪದ್ಮಶ್ರೀ ಪುರಸ್ಕೃತ ದಿವಂಗತ ಚಿಟ್ಟಾಣಿ ರಾಮಚಂದ್ರ ಹೆಗಡೆಯವರ ಪುತ್ರ ಸುಬ್ರಹ್ಮಣ್ಯ ಚಿಟ್ಟಾಣಿಯವರು ತಮ್ಮ ತಂದೆಯವರ ಹಾದಿಯಲ್ಲೇ ನಡೆದು, ಯಕ್ಷಗಾನ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿದವರು.

RELATED ARTICLES  ನಿರ್ವಹಣೆಯಿಲ್ಲದೆ ಸೊರಗುತ್ತಿದೆ ಶಿರಸಿಯ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣ: ಹಿಂದೆ ರಣಜಿ ಪಂದ್ಯ ನಡೆದ ಕ್ರೀಡಾಂಗಣದ ಕಥೆ...! ವ್ಯಥೆ...!

ಈ ಅಪಘಾತದಲ್ಲಿ ಅವರಿಗೆ ಗಂಭೀರ ಪೆಟ್ಟು ಬಿದ್ದಿದ್ದು, ಹೊನ್ನಾವರ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸ್ಥಳೀಯ ಮಾಹಿತಿ ಲಭ್ಯವಾಗಿದೆ.

ಅವರಿಗೆ ಯಾವುದೇ ರೀತಿಯ ತೊಂದರೆಯಾಗದಿರಲಿ ಎಂಬುದು ಅವರ ಅಭಿಮಾನಿಗಳ ಹಾರೈಕೆಯಾಗಿದ್ದು, ಆಸ್ಪತ್ರೆಯಿಂದ ಬರುವ ವರದಿಯನ್ನು ಹಾಗೂ ಹೆಚ್ಚಿನ ಮಾಹಿತಿಯನ್ನು  ನಿರೀಕ್ಷಿಸಲಾಗಿದೆ.

RELATED ARTICLES  ಪಿಎಸೈ ಹೆಸರಿನಲ್ಲಿಯೇ ನಕಲಿ ಖಾತೆ ರಚಿಸಿದ ಕಧೀಮರು : ಜನರೇ ಹುಷಾರ್..!

ಮಧ್ಯಾಹ್ನದ ವರದಿ

ಮೆದುಳಿಗೆ, ಬೆನ್ನು ಹುರಿಗೆ ಯಾವುದೇ ಅಪಾಯವಾಗಿಲ್ಲ. ನಾಲಿಗೆಗೆ ಪೆಟ್ಟಾಗಿದ್ದು ಮುಖ ಮತ್ತು ಮೂಗಿಗೆ ಗಾಯಗಳಾಗಿವೆ. ಅವರನ್ನು ತೀವ್ರ ನಿಗಾ ಘಟಕದಲ್ಲಿ ಇಡಲಾಗಿದ್ದು ಚೇತರಿಸಿಕೊಂಡ ಮೇಲೆ ಮುಖದ ಸಣ್ಣ ಪುಟ್ಟ ಶಸ್ತ್ರಚಿಕಿತ್ಸೆ ಮಾಡಲಾಗುವುದು ಎಂದು ವೈದ್ಯರು ಹೇಳಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಅವರ ಅಭಿಮಾನಿಗಳಲ್ಲಿ ಈ ವಿಷಯ ಸಮಾಧಾನ ಮೂಡಿಸಿದೆ.