ಹಿರಿಯ ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಚಿಟ್ಟಾಣಿಯವರಿಗೆ ಪ್ರಾಣಾಪಾಯವಿಲ್ಲ ಎಂಬ ಬಗ್ಗೆ ಅಧಿಕೃತ ಮಾಹಿತಿ ಹೊರಬಿದ್ದಿದೆ. ರವಿವಾರ ಸಂಜೆ ಹಡಿನಬಾಳ ಬ್ರಿಡ್ಜ್ ಬಳಿ ಬೈಕುಗಳ ಡಿಕ್ಕಿಯಲ್ಲಿ ಗಂಭೀರ ಗಾಯಗೊಂಡಿದ್ದ ಸುಬ್ರಹ್ಮಣ್ಯ ಚಿಟ್ಟಾಣಿಯವರಿಗೆ ಪ್ರಾಣಾಪಾಯವಿಲ್ಲ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ಮಣಿಪಾಲದ ವೈದ್ಯರು ಸ್ಪಷ್ಟಪಡಿಸಿದ್ದಾರೆ.
ಮೆದುಳಿಗೆ, ಬೆನ್ನು ಹುರಿಗೆ ಯಾವುದೇ ಅಪಾಯವಾಗಿಲ್ಲ. ನಾಲಿಗೆಗೆ ಪೆಟ್ಟಾಗಿದ್ದು ಮುಖ ಮತ್ತು ಮೂಗಿಗೆ ಗಾಯಗಳಾಗಿವೆ. ಅವರನ್ನು ತೀವ್ರ ನಿಗಾ ಘಟಕದಲ್ಲಿ ಇಡಲಾಗಿದ್ದು ಚೇತರಿಸಿಕೊಂಡ ಮೇಲೆ ಮುಖದ ಸಣ್ಣ ಪುಟ್ಟ ಶಸ್ತ್ರಚಿಕಿತ್ಸೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ. ಈ ಕುರಿತು ಕೆಲವು ಮಾಧ್ಯಮಗಳಲ್ಲಿ ಅಸ್ಪಷ್ಟ ವರದಿಗಳು ಬರುತ್ತಿರುವುದರಿಂದ ಅಧಿಕೃತವಾಗಿ ಈ ಮಾಹಿತಿ ನೀಡಲಾಗಿದೆ.
ಪದ್ಮಶ್ರೀ ಚಿಟ್ಟಾಣಿ ರಾಮಚಂದ್ರ ಹೆಗಡೆಯವರ ಹಿರಿಯ ಪುತ್ರ ಸುಬ್ರಹ್ಮಣ್ಯ ಚಿಟ್ಟಾಣಿ ಆದಷ್ಟು ಬೇಗ ರಂಗದಲ್ಲಿ ಕಾಣಿಸಿಕೊಳ್ಳಲಿ ಎಂದು ಹಾರೈಸೋಣ.