ಕಾರವಾರ: ತಾಲೂಕಿನ ದೇವಳಮಕ್ಕಿ ಗ್ರಾಮದ ನಿವಾಸಿ ಹಾಗೂ ಆ ಭಾಗದ ಯುವ ನೇತಾರರಾದ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ಪತ್ರಿಕೋದ್ಯಮ ವಿಭಾಗದ ಎರಡನೇ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿಯಾದ ಕುಮಾರ್ ಪ್ರಜ್ವಲ್ ಬಾಬುರಾಯ ಶೇಟ್ 2020-21 ನೇ ಸಾಲಿನ ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದ ಸ್ನಾತಕೋತ್ತರ ವಿದ್ಯಾರ್ಥಿ ಕೂಟದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.
ಭಾರತ ದೇಶದ ಅತ್ಯುನ್ನತ ವಿಶ್ವವಿದ್ಯಾಲಯದಲ್ಲಿ ಒಂದಾದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಕಾರವಾರದ ಪ್ರಜ್ವಲ್ ಬಾಬುರಾಯ ಶೇಟ್ ಪ್ರದಾನ ಕಾರ್ಯದರ್ಶಿಯಾಗಿದ್ದು ಇತನು ಶಾಲಾ ಕಾಲೇಜು ದಿನಗಳಲ್ಲಿಯೇ ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸಿ ನಾಯಕತ್ವ ಗುಣವನ್ನು ಹೊಂದಿದ್ದನು. ಈಗ ಕಾರವಾರ ತಾಲೂಕಿನ ಮೊಟ್ಟಮೊದಲ ಸ್ನಾತಕೋತ್ತರ ವಿದ್ಯಾರ್ಥಿ ಎಂದು ಹೇಳಲಾಗಿದೆ.
ಈಡೀ ಕರ್ನಾಟಕ ವಿಶ್ವವಿದ್ಯಾಲಯದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಆಗಿ ತಮ್ಮ ಕಾಲೇಜು ವಿದ್ಯಾರ್ಥಿ ಜೀವನದಲ್ಲಿ ಎರಡನೇ ಬಾರಿಗೆ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದಕ್ಕೆ ದೇವಳಮಕ್ಕಿ ಗ್ರಾಮಸ್ಥರು ಹಾಗೂ ಆತನ ಗೆಳೆಯ ಬಳಗದವರು ಮೆಚ್ಚುಗೆ ವ್ಯಕ್ತಪಡಿಸಿ ಶುಭಕೋರಿದ್ದಾರೆ..