ಬೆಂಗಳೂರು: ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದ್ದು, ಜೂ.21 ರಿಂದ ಜುಲೈ 5ರವರೆಗೆ ಪರೀಕ್ಷೆ ನಡೆಯಲಿದೆ. ಆದ್ರೆ, ಈ ಬಾರಿಯ ಪರೀಕ್ಷಾ ಪ್ರಶ್ನೆಪತ್ರಿಕೆ ಮಾದರಿಯಲ್ಲಿ ಕೊಂಚ ಬದಲಾವಣೆ ಮಾಡಿಲಾಗಿದ್ದು, ಬಹು ಆಯ್ಕೆ ಅಂದ್ರೆ, ಮಲ್ಟಿಪಲ್ ಚಾಯ್ಸ್ ಪ್ರಶ್ನೆಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ.

RELATED ARTICLES  ಬೆಂಗಳೂರು ಉತ್ತರ ಮಂಡಲದಲ್ಲಿ ಸಂಪನ್ನಗೊಂಡ ವಿದ್ಯಾರ್ಥಿ ವಾಹಿನಿಯ ಕಾರ್ಯಕ್ರಮ 'ಪರೀಕ್ಷೆ-ನಿರೀಕ್ಷೆ'

ಈ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್ ಮಾಹಿತಿ ನೀಡಿದ್ದು, ಎಸ್‍ಎಸ್‍ಎಲ್‍ಸಿ ಪರೀಕ್ಷೆ ಪ್ರಶ್ನೆಪತ್ರಿಕೆ ಮಾದರಿಯಲ್ಲಿ ಕೊಂಚ ಬದಲಾವಣೆ ಮಾಡಿಕೊಳ್ಳಲಾಗಿದ್ದು, ಪ್ರತಿವರ್ಷ 20 ಅಂಕಗಳಿಗೆ ಮಲ್ಟಿಪಲ್ ಚಾಯ್ಸ್ ಇರುತ್ತಿತ್ತು. ಆದ್ರೆ, ಈ ಬಾರಿ 30 ಅಂಕಗಳಿಗೆ ಮಲ್ಟಿಪಲ್ ಚಾಯ್ಸ್ ಪ್ರಶ್ನೆಗಳು ಇರುತ್ತದೆ ಎಂದಿದ್ದಾರೆ.

RELATED ARTICLES  ದಿನಾಂಕ 07/06/2019 ರ ದಿನ ಭವಿಷ್ಯ

ಇನ್ನುಳಿದಂತೆ ಎಸ್‍ಎಸ್‍ಎಲ್‍ಸಿ ಬೋರ್ಡ್ ಸ್ಟ್ಯಾಂಡರ್ಡ್‍ನಂತೆಯೇ ಪರೀಕ್ಷೆ ನಡೆಯಲಿದ್ದು, ಒಟ್ಟು 100 ಅಂಕಗಳಲ್ಲಿ 20 ಇಂಟರ್ನಲ್ ಅಂಕ ಮತ್ತು 80 ಮುಖ್ಯ ಪರೀಕ್ಷೆಯ ಅಂಕಗಳು ಇರುತ್ತದೆ. ಇದರಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ ಎಂದು ಹೇಳಿದ್ದಾರೆ.