ಕುಮಟಾ: ಶೈಕ್ಷಣಿಕ ಚಟುವಟಿಕೆಗಳ ವಿಚಾರದಲ್ಲಿ ಸದಾ ಮುಂಚೂಣ ಯಲ್ಲಿರುವ ಇಲ್ಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಕೊಂಕಣ ಎಜ್ಯುಕೇಶನ್ ಟ್ರಸ್ಟ್‍ನ ಸಿವಿಎಸ್‍ಕೆ ಪ್ರೌಢಶಾಲೆಯ ಒಂಭತ್ತನೇ ವರ್ಗದ ವಿದ್ಯಾರ್ಥಿಗಳಾದ ಕುಮಾರ ತಿಲಕ ಕುಮಟಾ ಹಾಗೂ ಕುಮಾರ ವೈಭವ ಶಾನಭಾಗ ಇವರು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಕರ್ನಾಟಕ ಸರ್ಕಾರ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ, ಸಾರ್ವಜನಿಕ ಶಿಕ್ಷಣ ಇಲಾಖೆ ಕರ್ನಾಟಕ ಸರ್ಕಾರ ಮತ್ತು ದೂರದರ್ಶನ ಕೇಂದ್ರ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಇತ್ತೀಚಿಗೆ ಕಾರವಾರದ ವಿಜ್ಞಾನ ಭವನದಲ್ಲಿ ನಡೆದ ಜಿಲ್ಲಾಮಟ್ಟದ ಸರ್ ಸಿ.ವಿ.ರಾಮನ್ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದುದಲ್ಲದೆ, ಬಾಹ್ಯಾಕಾಶ ವಿಜ್ಞಾನದ ವಿವಿಧ ಚಟುವಟಿಕೆಗಳು ಮತ್ತು ಅಂಶಗಳ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಲು ಬಾಹ್ಯಾಕಾಶ ಇಲಾಖೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ವತಿಯಿಂದ ನಡೆಸಲಾದÀ ಯುವಿಕಾ ಯುವ ವಿಜ್ಞಾನಿ ಸ್ಪರ್ಧೆಯಲ್ಲಿ ಇದೇ ಶಾಲೆಯ ಒಂಭತ್ತನೇ ವರ್ಗದ ಇನ್ನೋರ್ವ ವಿದ್ಯಾರ್ಥಿನಿ ಕುಮಾರಿ ಅಕ್ಷತಾ ಶಾನಭಾಗ ಜಿಲ್ಲಾಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಪುರಸ್ಕಾರವು ರೂ. 3000 ನಗದು ಹಾಗೂ ಪ್ರಶಸ್ತಿಪತ್ರವನ್ನೊಳಗೊಂಡಿದೆ.
ವಿದ್ಯಾರ್ಥಿಗಳ ಈ ಅಮೋಘ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಮುಖ್ಯಾಧ್ಯಾಪಕರು, ಶೈಕ್ಷಣ ಕ ಸಲಹೆಗಾರರು, ಶಿಕ್ಷಕ ವೃಂದ ಹಾಗೂ ಪಾಲಕರು ಹರ್ಷ ವ್ಯಕ್ತಪಡಿಸಿ ಮುಂದಿನ ಹಂತದ ಸ್ಪರ್ಧೆಗೆ ಶುಭ ಹಾರೈಸಿದ್ದಾರೆ.

RELATED ARTICLES  ಶಿರಸಿಯಲ್ಲಿ ಲಾಡ್ಜನಲ್ಲಿ ಆತ್ಮ ಹತ್ಯೆಗೆ ಶರಣಾದ ಯುವಕ: ದಾಖಲಾಯ್ತು ಪ್ರಕರಣ