ಶಿರಸಿ : ಸಂಸದರಾದ ಶ್ರೀ ಅನಂತಕುಮಾರ್ ಹೆಗಡೆ ಯವರು ಹಲವು ವರ್ಷಗಳಿಂದ ತೀವ್ರವಾದ ಬೆನ್ನು ನೋವು ಮತ್ತು ಕಾಲು ನೋವಿನಿಂದ ಬಳಲುತ್ತಿದರು ಇವಾಗ ಸಂಸದರು ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ.

ಅನಂತಕುಮಾರ್ ಹೆಗಡೆ ಅವರ ಆರೋಗ್ಯದ ಬಗ್ಗೆ ಆಪ್ತ ಸಹಾಯಕರು ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ಇತ್ತೀಚೆಗೆ ಕೆಲವು ತಿಂಗಳುಗಳಿಂದ ಬೆನ್ನು ನೋವು ಮತ್ತು ಕಾಲು ನೋವು ಉಲ್ಬಣಗೊಂಡಿರುವ ಹಿನ್ನೆಲೆಯಲ್ಲಿ ತಜ್ಞರು ತಕ್ಷಣವೇ ಕಾಲಿನ ಶಸ್ತ್ರ ಚಿಕಿತ್ಸೆಯನ್ನು ನಡೆಸುವ ಅವಶ್ಯಕತೆ ಇದೆ ಎಂದು ಹೇಳಿದ್ದರು.

RELATED ARTICLES  ಭಟ್ಕಳದಲ್ಲಿ ಹಾಡು ಹಗಲೇ ಮನೆಗೆ ಕನ್ನ ಹಾಕಿದ ಖದೀಮರು.

ಇದೀಗ ಕೆಲವು ದಿನಗಳ ಹಿಂದೆ ನಡೆಸಿದ ಗಂಭೀರ ಶಸ್ತ್ರ ಚಿಕಿತ್ಸೆಯ ನಂತರ ಸಂಸದರು ಚೇತರಿಸಿಕೊಳ್ಳುತ್ತಿದ್ದಾರೆ. ವೈದ್ಯರು ದೀರ್ಘಾವಧಿ ವಿಶ್ರಾಂತಿ ಪಡೆಯುಲು ಸೂಚಿಸಿರುವ ಹಿನ್ನಲೆಯಲ್ಲಿ ಪೂರ್ಣವಾಗಿ ಗುಣಮುಖರಾಗುವ ತನಕ ಸಂಸದರು ಸಾರ್ವಜನಿಕ ಕಾರ್ಯಕ್ರಮ ಹಾಗೂ ಭೇಟಿಗೆ ಲಭ್ಯವಿರುವುದಿಲ್ಲ ಎಂದು ತಿಳಿಸಿದ್ದಾರೆ.

RELATED ARTICLES  ಸಿ.ಎ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿಶ್ವೇಶ್ವರ ಗೋಪಾಲ ಭಟ್ಟ

ಅನಂತ ಕುಮಾರ್ ಹೆಗಡೆ ಆದಷ್ಟು ಬೇಗನೆ ಗುಣಮುಖರಾಗಿ ಸಾರ್ವಜನಿಕ ಸೇವೆಗೆ ಲಭ್ಯವಾಗಲಿ ಎಂದು ಅವರ ಹಿತೈಶಿಗಳು ಆಶಿಸಿದರೆ, ಅವರು ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತಾರೆಯೋ ಎಂಬ ಬಗ್ಗೆಯೂ ಗಹನವಾದ ಚರ್ಚೆಗಳು ಪ್ರಾರಂಭವಾಗಿದೆ.