ಬೆಂಗಳೂರು: ವಿಪಕ್ಷಗಳ ತೀವ್ರ ವಿರೋಧ ಹಾಗೂ ಗದ್ದಲದ ನಡುವೆಯೂ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರು ಬಜೆಟ್​ ಮಂಡನೆ ಮಾಡಿದರು.

2021-2022ನೇ ಸಾಲಿನ ಆಯವ್ಯಯ ಮಂಡನೆ ಮಾಡುತ್ತಿರುವ ಯಡಿಯೂರಪ್ಪ ಅವರು, ಸರ್ಕಾರದ ಸಾಧನೆಗಳನ್ನು ವಿವರಿಸುತ್ತಿದ್ದಾರೆ. ಇದೇ ವೇಳೆ ಕೊರೊನಾ ಸಂದರ್ಭದಲ್ಲಿ ಶ್ರಮಿಸಿದವರಿಗೆ ಧನ್ಯವಾದ ಅರ್ಪಿಸಿದ್ದಾರೆ

ಕೊರೊನಾ ಸಂಕಷ್ಟದ ನಡುವೆಯೂ ಸರ್ಕಾರ ಕೆಲಸ ಮಾಡಿದೆ. ಆರೋಗ್ಯ, ಮೂಲಸೌಕರ್ಯಕ್ಕೆ ಸರ್ಕಾರ ಹೆಚ್ಚು ಒತ್ತು ನೀಡಿದೆ. ವೈದ್ಯರು, ಪೊಲೀಸರು, ಕಂದಾಯ, ನಗರಾಭಿವೃದ್ಧಿ ಸಿಬ್ಬಂದಿ ಕೊರೊನಾ ಸಂಕಷ್ಟದಲ್ಲಿ ಹಗಲಿರಳು ಕೆಲಸ ಮಾಡಿದ್ದಾರೆ. ಕೊರೊನಾ ಸಂಕಷ್ಟವನ್ನು ನಾವು ಒಂದು ಕ್ಷಣವೂ ಮರೆಯುವಂತಿಲ್ಲ. ಕೊರೊನಾ ಸಂಕಷ್ಟ ಒಂದು ದುಸ್ವಪ್ನ ಎಂದು ಕೊರೋನಾ ಸಂದರ್ಭವನ್ನು ಸ್ಮರಿಸಿಕೊಂಡಿದ್ದಾರೆ.

ಕೋವಿಡ್ ಸಂಕಷ್ಟದ ನಡುವೆಯೂ ಸರ್ಕಾರ ರಾಜ್ಯದ ಜನರ ಹಿತಾಸಕ್ತಿ ಕಾಪಾಡುವಲ್ಲಿ ಸಫಲವಾಗಿದೆ. ಜಿಲ್ಲಾ ಕೇಂದ್ರಗಳಲ್ಲಿ 2 ಶಿಶುಪಾಲನಾ ಕೇಂದ್ರಗಳ ಸ್ಥಾಪನೆ ಮಾಡಲಾಗಿದ್ದು, ಕೋವಿಡ್ ಗೆ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ. ಕೋವಿಡ್ ಲಸಿಕೆ ಹಂಚಿಕೆಯಲ್ಲಿ ರಾಷ್ಟ್ರದ ಗಮನ ಸೆಳೆದಿದ್ದೇವೆಂದು.

ಕೊರೊನಾ ಲಾಕ್ ಡೌನ್ ಕಾರಣಕ್ಕೆ ಅರ್ಥಿಕ ವರ್ಷದ ಮೊದಲ 3 ತಿಂಗಳು ರಾಜಸ್ವ ಸಂಗ್ರಹ ಇಳಿಕೆ ಆಗಿದೆ ಎಂಬುದನ್ನು ಒಪ್ಪಿಕೊಳ್ಳುತ್ತೇವೆ. ಆದರೆ, ಈಗ ರಾಜ್ಯದಲ್ಲಿ ಆಹಾರ ಧಾನ್ಯ ಉತ್ಪಾದನೆಯಲ್ಲಿ ನೂತನ ದಾಖಲೆ ನಿರ್ಮಿಸಿರುವುದು ಸಂತಸದ ಸಂಗತಿ ಎಂದು ಹೇಳಿದ್ದಾರೆ.

ಕೊರೊನಾ ಸಂಕಷ್ಟದಿಂದಾಗಿ ಸಾಕಷ್ಟು ನಷ್ಟವಾಗಿದೆ. ಕೈಗಾರಿಕಾ ವಲಯ ಶೇ 5.1 ಹಾಗೂ ಸೇವಾ ವಲಯ ಶೇ 3.1 ಇಳಿಕೆ ಆಗಿದೆ. ಆದರೆ, ಕೃಷಿ ಕ್ಷೇತ್ರದಲ್ಲಿ ಶೇ 6.4ರಷ್ಟು ಬೆಳವಣಿಗೆ ಕಂಡಿದೆ. ಹಾಗೆಯೇ ಮಾಹಿತಿ ತಂತ್ರಜ್ಞಾನಕ್ಕೆ ಶೇ 40ರಷ್ಟು ಕರ್ನಾಟಕದ ಕೊಡುಗೆ ಇದ್ದು, ಜಿಡಿಪಿಗೆ ಶೇ 8ರಷ್ಟು ಕರ್ನಾಟಕದ ಕೊಡುಗೆ ಇದೆ ಎಂದು ತಿಳಿಸಿದ್ದಾರೆ.

ವಿವಿಧ ಧರ್ಮ, ಮಠಗಳ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಯಡಿಯೂರಪ್ಪ 2021-22ನೇ ಸಾಲಿನ ಬಜೆಟ್‌ನಲ್ಲಿ ಅನುದಾನಗಳನ್ನು ಪ್ರಕಟಿಸಿದ್ದಾರೆ,

ಪ್ರಸಕ್ತ ಸಾಲಿನ ರಾಜ್ಯದ ಆಯವ್ಯಯ ಮಂಡನೆ ಮಾಡುತ್ತಿರುವ ಯಡಿಯೂರಪ್ಪ ಅವರು, ಕ್ರೈಸ್ತ ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ ರೂ. 200 ಕೋಟಿ, ವೀರಶೈವ ಲಿಂಗಾಯತ ಅಭಿವೃದ್ಧಿ ರೂ.500 ಕೋಟಿ ಅನುದಾನ ಘೋಷಣೆ ಮಾಡಿದ್ದಾರೆ.

ಕ್ರಿಶ್ಚಿಯನ್ ಸಮುದಾಯದ ಸರ್ವತೋಮುಖ ಅಭಿವೃದ್ದಿಗೆ ರೂ.200 ಕೋಟಿ ಹಾಗೂ ಅಲ್ಪಸಂಖ್ಯಾತರಿಗೆ 1,500 ಕೋಟಿ ರೂಪಾಯಿ ಮೀಸಲು ಇರಿಸಲಾಗುವುದು. ಅಂತೆಯೇ ಒಕ್ಕಲಿಗರ ಸರ್ವತೋಮುಖ ಅಭಿವೃದ್ಧಿಗೆ ನಿಗಮ ಸ್ಥಾಪಿಸಿ, ನಿಗಮದ ಚಟುವಟಿಕೆಗೆ 500 ಕೋಟಿ ರೂಪಾಯಿ ಮೀಸಲು ಇಡಲಾಗುವುದು ಎಂದು ಹೇಳಿದ್ದಾರೆ.

RELATED ARTICLES  ಸಂಪನ್ನವಾಯ್ತು ಗೋಳಿ ಪ್ರೌಢಶಾಲೆಯ ಸುವರ್ಣ ಮಹೋತ್ಸವದ 2ನೇ ದಿನದ ಕಾರ್ಯಕ್ರಮ.

ಬ್ರಾಹ್ಮಣ ಅಭಿವೃದ್ಧಿ ಮಂಡಳಿಗೆ 50 ಕೋಟಿ, ಆದಿಚುಂಚನಗಿರಿ ನಾಥ ಪಾರಂಪರಿಕ ಕೇಂದ್ರಕ್ಕೆ ರೂ. 10 ಕೋಟಿ, ಅಯೋಧ್ಯೆಯ ಶ್ರೀರಾಮಜನ್ಮಭೂಮಿಯಲ್ಲಿ ಕರ್ನಾಟಕ ಯಾತ್ರಿ ನಿವಾಸ ನಿರ್ಮಾಣಕ್ಕೆ ರೂ.10 ಕೋಟಿ ಅನುದಾನ ಮೀಸಲಿಡಲಾಗಿದೆ.

ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ 50 ಕೋಟಿ ರೂ. ನೀಡಲಾಗುತ್ತಿದ್ದು, ಕಿತ್ತೂರು ಕೋಟೆ ಆವರಣದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ನಡೆಸಲಾಗುವುದು. ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ಜಗಜ್ಯೋತಿ ಬಸವಣ್ಣ ಜನ್ಮಸ್ಥಳ ಅಭಿವೃದ್ಧಿಗಾಗಿ ರೂ. 5 ಕೋಟಿ, ಲಿಂಗೈಕ್ಯರಾದ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ್ ಶ್ರೀಗಳು ಹಾಗೂ ಪೇಜಾವರ ಮಠದ ವಿಶ್ವೇಶ ತೀರ್ಥ ಶ್ರೀಗಳ ಸ್ಮೃತಿವನಕ್ಕಾಗಿ ರೂ. 2 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಶಿಕ್ಷಣ ಕ್ಷೇತ್ರ

ಕರ್ನಾಟಕ ಬಜೆಟ್-2021ರಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹಲವು ಯೋಜನೆಗಳು ಪ್ರಕಟವಾಗಿವೆ.

ಸರ್ಕಾರಿ ಶಾಲೆಗಳ ಪೀಠೋಪಕರಣಕ್ಕೆ 50 ಕೋಟಿ ರೂಪಾಯಿ ಮೀಸಲು, ಸ್ಮಾರ್ಟ್ ಕ್ಲಾಸ್ ರೂಂಗಳಿಗಾಗಿ 50 ಕೋಟಿ ರೂ.ಅನುದಾನ ನೀಡಲಾಗುವುದು ಎಂದು ಘೋಷಿಸಿದ್ದಾರೆ.

ಕಟ್ಟಡ ನಿರ್ಮಾಣ ಕಾರ್ಮಿಕರ ಮಕ್ಕಳಿಗಾಗಿ 100 ಕಿತ್ತೂರು ರಾಣಿ ಶಿಶುಪಾಲನಾ ಕೇಂದ್ರ, ಕೃಷಿ ವಿವಿಯಲ್ಲಿ ರೈತರ ಮಕ್ಕಳಿಗೆ ಶೇ.40-50 ರಷ್ಟು ಮೀಸಲಾತಿ, ಶಿವಮೊಗ್ಗದ ಆಯುರ್ವೇದ ಕಾಲೇಜು ಆಯುಷ್ ವಿವಿಯಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದಿದ್ದಾರೆ.

ಜಿಲ್ಲಾ ಕೇಂದ್ರಗಳಲ್ಲಿ 50 ಮೆಟ್ರಿಕ್ ನಂತರದ ಹಾಸ್ಟೆಲ್ ಗಳ ಸ್ಥಾಪನೆ ಮಾಡುವುದಾಗಿ ಹೇಳಿರುವ ಯಡಿಯೂರಪ್ಪ ಇದಕ್ಕಾಗಿ 50 ಕೋಟಿ ರೂಪಾಯಿ ವ್ಯಯಿಸಲಾಗುವುದು, ಇದರಿಂದ 5 ಸಾವಿರ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದಿದ್ದಾರೆ.

ರಾಜ್ಯದ 4 ವಿಭಾಗಗಳಲ್ಲಿ ಮುರಾರ್ಜಿ ವಸತಿ ಶಾಲೆ ಆರಂಭಿಸಲಾಗುವುದು, ಪರಿಶಿಷ್ಟ ಪಂಗಡದ ಆಶ್ರಮದ ಶಾಲೆಗಳಿಗೆ ವಾಲ್ಮೀಕಿ ಶಾಲೆಗಳೆಂದು ಮರು ನಾಮಕರಣ ಮಾಡಲಾಗುವುದು. ರಾಜ್ಯದ 400 ಸರ್ಕಾರಿ ಉರ್ದು ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಬೋಧನೆಗೆ ಅವಕಾಶ ಕಲ್ಪಿಸಲಾಗುವುದು.

ನುರಿತ ಮಾನವ ಸಂಪನ್ಮೂಲ ಅಭಿವೃದ್ದಿಗೆ ಹಬ್ ಮತ್ತು ಸ್ಪೋಕ್ ಮಾದರಿಯಲ್ಲಿ 150 ಸರ್ಕಾರಿ ತರಬೇತಿ ಸಂಸ್ಥೆಗಳಿಗೆ 4 ಸಾವಿರದ 636 ಕೋಟಿ ಅನುದಾನ ನೀಡಲಾಗುವುದು. ಇದರಲ್ಲಿ 4080 ಕೋಟಿ ರೂಪಾಯಿಗಳನ್ನು ಟಾಟಾ ಟೆಕ್ನಾಲಜಿಸ್ ಲಿಮಿಟೆಡ್ ಭರಿಸಲಿದೆ. ಶಿಕ್ಷಕರ ತರಬೇತಿ ಕೇಂದ್ರಕ್ಕೆ 18 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

RELATED ARTICLES  ಅಗ್ರಹಾರ ಗಣಪತಿ ದೇವಸ್ಥಾನ ಕಳ್ಳತನ ಮಾಡಿದ ಆರೋಪಿ ಪೊಲೀಸ್ ಬಲೆಗೆ

ವರ್ಷವಿಡೀ ರಾಜ್ಯದ ಜನತೆ ಕೋವಿಡ್-19 ಸಂಕಷ್ಟದಿಂದ ಆರ್ಥಿಕವಾಗಿ ಬಹಳ ನೊಂದು ಬೆಂದು ಹೋಗಿದ್ದಾರೆ, ಹೀಗಾಗಿ ಈ ವರ್ಷ ಯಾವುದೇ ಹೊಸ ತೆರಿಗೆ ವಿಧಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೋಮವಾರ ಮಂಡಿಸಿರುವ ಬಜೆಟ್ ನಲ್ಲಿ ಘೋಷಿಸಿದ್ದಾರೆ.

ಕೋವಿಡ್ ನಿಂದ ಸಂಕಷ್ಟಕ್ಕೀಡಾಗಿರುವ ಜನತೆಗೆ ಮತ್ತಷ್ಟು ತೆರಿಗೆ ಹೊರೆ ವಿಧಿಸುವುದಿಲ್ಲ. ಆದರೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮಾರಾಟ ತೆರಿಗೆ ಇಳಿಸುವುದಿಲ್ಲ. ದಕ್ಷಿಣದ ಇತರ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಕಡಿಮೆಯಿದೆ. ಹೀಗಾಗಿ ಇಂಧನದ ಮೇಲೆ ಹೊಸ ತೆರಿಗೆ ವಿಧಿಸುವುದಿಲ್ಲ, ಈಗಿರುವ ಮಾರಾಟ ತೆರಿಗೆ ಕಡಿತವೂ ಇಲ್ಲ ಎಂದು ಸ್ಪಷ್ಟಪಡಿಸಿದರು.

ಈ ಆರ್ಥಿಕ ಸಾಲಿನಲ್ಲಿ ನಿರೀಕ್ಷೆ ಮಾಡಲಾಗಿದ್ದ 28 ಸಾವಿರದ 591 ಕೋಟಿ ತೆರಿಗೆಗೆ ಪ್ರತಿಯಾಗಿ 20 ಸಾವಿರದ 053 ಕೋಟಿ ರೂಪಾಯಿಗೆ ಇಳಿಕೆ ಮಾಡಲಾಗಿದೆ. 2021-22ನೇ ಸಾಲಿಗೆ 24 ಸಾವಿರದ 273 ಕೋಟಿ ತೆರಿಗೆ ಪಾಲು ನೀಡುವುದಾಗಿ ಕೇಂದ್ರ ತಿಳಿಸಿದೆ. ರಾಜ್ಯದ ಜಿಎಸ್ ಟಿ ಸಂಗ್ರಹ ಇಳಿಕೆಯಾಗಿದೆ. ಇದನ್ನು ಕೇಂದ್ರ ಸರ್ಕಾರ ನೀಡಬೇಕಿದೆ. ಆದರೆ ಕೇಂದ್ರ ಸರ್ಕಾರ ಸಾಲ ಪಡೆದು ಹಣ ನೀಡುವುದಾಗಿ ಹೇಳಿದೆ. ಈ ಸಾಲ ಮರುಪಾವತಿಯನ್ನು ಜಿಎಸ್ ಟಿ ಮರುಪಾವತಿ ಉಪಕ್ರಮದಲ್ಲಿ ನೀಡುವುದಾಗಿ ಹೇಳಿದೆ ಎಂದರು.

ಅವರು ಇಂದು ವಿಧಾನ ಸೌಧದಲ್ಲಿ 2021-22ನೇ ಆರ್ಥಿಕ ಸಾಲಿನ ಬಜೆಟ್ ಮಂಡಿಸಿ, ಯಾವುದೇ ಹೊಸ ತೆರಿಗೆ ವಿಧಿಸದೆ, ಈಗಿರುವ ತೆರಿಗೆಯನ್ನು ಕಡಿತ ಮಾಡದೇ ಸಮತೋಲನದ ಬಜೆಟ್ ಮಂಡಿಸುವ ಪ್ರಯತ್ನ ಮಾಡಿದರು. 45 ಲಕ್ಷ ರೂಪಾಯಿವರೆಗಿನ ಫ್ಲ್ಯಾಟ್ ಖರೀದಿಗೆ ಮುದ್ರಾಂಕ ಶುಲ್ಕ ಕೂಡ ಇಲ್ಲ ಎಂದು ತಿಳಿಸಿದರು. ಇದರಿಂದ ಮಧ್ಯಮ ವರ್ಗದ ನಗರ ಪ್ರದೇಶದ ನಿವಾಸಿಗಳಿಗೆ ಪ್ರಯೋಜನವಾಗಲಿದೆ. ನೋಂದಣಿ, ಮುದ್ರಾಂಕ ಶುಲ್ಕ ಶೇ.5ರಿಂದ ಶೇಕಡಾ 3ಕ್ಕೆ ಇಳಿಕೆ ಮಾಡಲಾಗಿದೆ ಎಂದರು.