ಬೆಂಗಳೂರು : ಐಪಿಎಂಎಟಿ ಮತ್ತು ಎನ್ಇಎಸ್ ಟಿ ಪರೀಕ್ಷೆಯ ಹಿನ್ನೆಲೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ದ್ವಿತೀಯ ಪಿಯುಸಿ ಪರೀಕ್ಷಾ ದಿನಾಂಕದಲ್ಲಿ ಬದಲಾವಣೆಯನ್ನು ಮಾಡಿದ್ದು, ಅಂತಿಮ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ.

ಪದವಿ ಪೂರ್ವ ಶಿಕ್ಷಣ ಇಲಾಖೆ ಮೇ 24ರಿಂದ ಜೂನ್ 10ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲು ನಿರ್ಧರಿಸಲಾಗಿತ್ತು. ನಂತರದಲ್ಲಿ ವೇಳಾಪಟ್ಟಿಗೆ ಸಂಬಂಧಿಸಿದಂತೆ ಬಂದಿರುವ ಆಕ್ಷೇಪಣೆಗಳನ್ನು ಪರಿಶೀಲಿಸಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಮೇ 24ರಿಂದ ಜೂನ್ 16ರ ವರೆಗೆ ಪರೀಕ್ಷೆ ನಡೆಸುವ ಕುರಿತು ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಇದೀಗ ಜೂನ್ 14ರಂದು ನಡೆಯಲಿರುವ ಐಪಿಎಂಎಟಿ ಹಾಗೂ ಎನ್ಇಎಸ್ ಟಿ ಪರೀಕ್ಷೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಅನುಕೂಲತೆಗೆ ತಕ್ಕಂತೆ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಾಗಿದೆ.

RELATED ARTICLES  ನಿವೃತ್ತ ಅಧಿಕಾರಿ, ಕವಿ ತೆಂಕಣಕೇರಿಯ ಕೆ. ಡಿ. ನಾಯ್ಕ ಇನ್ನಿಲ್ಲ