ಬೆಂಗಳೂರು: ಅರಬ್ಬೀ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ತೀವ್ರತೆ ಪ್ರತಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬೀಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

RELATED ARTICLES  ಆಹಾರ ಕಿಟ್ ವಿತರಿಸುವಲ್ಲಿ ತಾರತಮ್ಯ ಆರೋಪ : ಸೋನಿ ನೇತೃತ್ವದಲ್ಲಿ ಪ್ರತಿಭಟನೆ

ಅರಬ್ಬೀ ಸಮುದ್ರ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ತೀವ್ರತೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮಾ.13ಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಮಳೆ ಆಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಶುಕ್ರವಾರ ಅಲ್ಲಲ್ಲಿ ಚದುರಿದಂತೆ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

RELATED ARTICLES  ಭಟ್ಕಳದ ವೆಂಕಟಾಪುರ ಹೊಳೆಯಲ್ಲಿ ಮೊಸಳೆ - ಜನರಲ್ಲಿ ಹೆಚ್ಚಿದೆ ಭಯ.