ಶಿರಸಿ: ಸಾರಿಗೆ ಸಂಸ್ಥೆಯ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಉಂಟಾದ ಪರಿಣಾಮ ದ್ವಿಚಕ್ರ ವಾಹನದ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಎಸ್.ಬಿ.ಐ. ಸರ್ಕಲ್ ಬಳಿ ನಡೆದಿದೆ.

ಶಿರಸಿಯ ಗಣೇಶ ನಗರದ ರವಿಚಂದ್ರ ವಡ್ಡರ್ ಸುನೀಲ ಇಂದೂರ ಮೃತರು. ರವಿಚಂದ್ರ ತಂದೆ ಹನುಮಂತಪ್ಪ ಸೋಮವಾರ ನಸುಕಿನ ಜಾವ ಮೃತಪಟ್ಟಿದ್ದು, ಅವರ ಶವಸಂಸ್ಕಾರಕ್ಕೆ ಹೂ ತರಲು ಇಬ್ಬರು ಮಾರುಕಟ್ಟೆಗೆ ತೆರಳುತ್ತಿದ್ದರು. ಈ ವೇಳೆ ಇನ್ನೊಂದು ರಸ್ತೆಯಿಂದ ಬಂದ ಬಸ್ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ.

RELATED ARTICLES  ಅರಣ್ಯ ಸಿಬ್ಬಂದಿಗಳ ಮೇಲೆ ಹಲ್ಲೆಗೆ ಯತ್ನ:ಇಬ್ಬರ ಬಂಧನ

ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಬಸ್ ಅಡಿಗೆ ಸಿಲುಕಿದೆ. ಕೆಲಕಾಲ ಸ್ಥಳದಲ್ಲಿ ಗೊಂದಲದ ವಾತಾವರಣ ಉಂಟಾಗಿತ್ತು. ತಂದೆ ಹಾಗೂ ಮಗನನ್ನು ಒಂದೇ ದಿನ ಕಳೆದುಕೊಂಡ ಮನೆಯಲ್ಲಿ ನೀರವ ಮೌನ ಆವರಿಸಿದೆ. ಮನೆ ಮಂದಿಯೆಲ್ಲರೂ ದಿಕ್ಕು ಕಾಣದಂತಾಗಿದ್ದಾರೆ. ಆಕ್ರಂದನ ಮುಗಿಲುಮುಟ್ಟಿತ್ತು.

RELATED ARTICLES  ಸಹಸ್ರಲಿಂಗದಲ್ಲಿ ದಂಪತಿಗಳಿಂದ ಬಿರಿಯಾನಿ ಸೇವನೆ : ಜಾಲತಾಣದಲ್ಲಿ ಆಕ್ರೋಶ

ಸ್ಥಳಕ್ಕೆ ಡಿವೈಎಸ್ಪಿ ರವಿ ನಾಯ್ಕ ಭೇಟಿ ನೀಡಿದ್ದು ಪರಿಶೀಲಿನೆ ನಡೆಸಿದ್ದು, ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.