ಶಿರಸಿ: ನಗರದ ಕೋಟೆಕೆರೆಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಶನಿವಾರ ಬೆಳಿಗ್ಗೆ ಪತ್ತೆಯಾಗಿದೆ.

ಬಿಳಿ ಅಂಗಿ ಹಾಗೂ ಕಡು ಕಂದು ಬಣ್ಣದ ಪ್ಯಾಂಟ್ ಧರಿಸಿರುವ ಅಜಮಾಸು 35 ರಿಂದ 40 ವರ್ಷ ವಯಸ್ಸಿನ ವ್ಯಕ್ತಿಯ ಮೃತದೇಹದ ಪತ್ತೆಯಾಗಿದ್ದು, ಮುಂಜಾನೆ ವಾಕಿಂಗ್ ಹೋದ ಸಂದರ್ಭದಲ್ಲಿ ಸಾರ್ವಜನಿಕರ ಬೆಳಕಿಗೆ ಬಂದಿದೆ.

RELATED ARTICLES  ಮಹಾತ್ಮಾ ಗಾಂಧಿ ಪ್ರೌಢಶಾಲೆ: ಸಂಪೂರ್ಣ ಉಚಿತ ಶಿಕ್ಷಣಕ್ಕೆ ಒಲವು -ಮೋಹನ ಶಾನಭಾಗ

ಎರಡು ದಿನಗಳ ಹಿಂದೆ ಈಜಲು ಹೋಗಿಯೋ ಅಥವಾ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪ್ರಾಥಮಿಕ ವರದಿಯಲ್ಲಿ ದಾಖಲಿಸಲಾಗಿದೆ. ಗುರುತು ಸಿಕ್ಕಲ್ಲಿ ಮಾರುಕಟ್ಟೆ ಪೊಲೀಸ್ ಠಾಣೆಯನ್ನು ಸಂಪರ್ಕಿಸಲು ತಿಳಿಸಲಾಗಿದ್ದು, ಮಾರುಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES  ಮರಳಿ ಕಾಡಿಗೆ ಹೊಗಲಾರದ ಸ್ಥಿತಿಯಲ್ಲಿ ಓಡಾಡುತ್ತಿರುವ ಅನಾರೋಗ್ಯಪೀಡಿತ ಆನೆ.!